Webdunia - Bharat's app for daily news and videos

Install App

ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ!

Webdunia
ಶನಿವಾರ, 30 ಅಕ್ಟೋಬರ್ 2021 (07:37 IST)
ಬೆಂಗಳೂರು : ಸ್ಯಾಂಡಲ್​ವುಡ್ನಟ, ಅಭಿಮಾನಿಗಳಿಂದ ಅಪ್ಪು ಎಂದು ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಪುನೀತ್ ನಿಧನಕ್ಕೆ ದೇಶವೇ ಕಂಬನಿ ಮಿಡಿದಿದ್ದು, ಅಭಿಮಾನಿಗಳು ತೀವ್ರ ಶೋಕದಲ್ಲಿ ಮುಳುಗಿದ್ದಾರೆ.
ಪುನೀತ್ ರಾಜಕುಮಾರ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಂಠೀರವ ಸ್ಟುಡಿಯೋದಲ್ಲಿ ನಾಳೆ (ಭಾನುವಾರ) ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಡಾ.ರಾಜ್ ಹಾಗೂ ಪಾರ್ವತಮ್ಮ ಸಮಾಧಿ ಪಕ್ಕದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಪುನೀತ್ ನಿಧನಕ್ಕೆ ದೇಶದ ವಿವಿಧ ಭಾಷೆಗಳ ಚಿತ್ರರಂಗಗಳು, ಕಲಾವಿದರು ಸಂತಾಪ ಸೂಚಿಸಿದ್ದಾರೆ. ಇಂದು ಅಂತಿಮ ದರ್ಶನ ಪಡೆಯಲು ಟಾಲಿವುಡ್ ನಟರು ಆಗಮಿಸುವ ನಿರೀಕ್ಷೆ ಇದೆ. ರಾಜ್ಯದ ವಿವಿದೆಡೆಯಿಂದ ಅಬಿಮಾನಿಗಳು ಆಗಮಿಸುತ್ತಿದ್ದು, ಕಂಠೀರವ ಸ್ಟೇಡಿಯಂ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರೈಲ್ವೆ ನಿಲ್ದಾಣ, ಮೆಜೆಸ್ಟಿಕ್ಗಳಲ್ಲೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಕಾಗಿನೆಲೆ ಶ್ರೀಗಳು ನಿನ್ನೆ ರಾತ್ರಿ ಪುನೀತ್ ಅಂತಿಮ ದರ್ಶನ ಪಡೆದಿದ್ದಾರೆ.
ರಾತ್ರಿ ಮಳೆಯನ್ನೂ ಲೆಕ್ಕಿಸದೇ ಕಾದು, ಅಪ್ಪು ದರ್ಶನಕ್ಕೆ ತೆರಳುತ್ತಿರುವ ಅಭಿಮಾನಿಗಳು
ಅಭಿಮಾನಿಗಳು ಕಳೆದ 12 ಗಂಟೆಯಿಂದ ನಿರಂತರವಾಗಿ ದರ್ಶನ ಪಡೆಯುತ್ತಿದ್ದಾರೆ. ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿರುವ ಅಭಿಮಾನಿಗಳು, ರಾತ್ರಿ ಮಳೆಯನ್ನು ಲೆಕ್ಕಿಸದೇ ಸಾಲಿನಲ್ಲಿ ನಿಂತು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕಾಗಿನೆಲೆ ಶ್ರೀಗಳು ನಿನ್ನೆ ರಾತ್ರಿ ಪುನೀತ್ ಅಂತಿಮ ದರ್ಶನ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments