ನವದೆಹಲಿ:'ನಾನು ಅವನಲ್ಲ ಅವಳು', ಖ್ಯಾತಿಯ ನಟ ಸಂಚಾರಿ ವಿಜಯ್ ಅವರು ಜೂನ್ 15ರಂದು ಕೊನೆಯುಸಿರೆಳೆದಿದ್ದರು.
ಇದೀಗ ಅವರಿಗೆ ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್ ವತಿಯಿಂದ ಗೌರವ ಸಲ್ಲಿಸಲಾಗಿದೆ. "ALWAYS IN OUR HEART, SANCHARI VIJAY, GONE YET NOT FORGOTTEN"- ಇದು ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್ನಲ್ಲಿ ಪ್ರಸಾರವಾಗುತ್ತಿರುವ ಸಂದೇಶ.
ಈ ಸಂದೇಶ 24 ಗಂಟೆಗಳ ಕಾಲ ಥಿಯೇಟರ್ ಬೋರ್ಡ್ ಮೇಲೆ ಡಿಸ್ಪ್ಲೇ ಆಗಲಿದೆ. ಅತ್ಯದ್ಭುತ ಕಲಾವಿದ ಸಂಚಾರಿ ವಿಜಯ್ಗೆ ಫ್ಲಾಂಕ್ಲಿನ್ ಥಿಯೇಟರ್ನವರು ಸಲ್ಲಿಸಿದ ಗೌರವ ಇದಾಗಿದೆ. ಅಂದಹಾಗೆ, ಇದು ಸಾಧ್ಯವಾಗುವುದಕ್ಕೆ ಕಾರಣವಾಗಿದ್ದು,
ಅಮೆರಿಕದಲ್ಲಿ ವಾಸಿಸುತ್ತಿರುವ ಕನ್ನಡಿಗ, ಸಿನಿಮಾ ನಿರ್ಮಾಪಕ ರವಿ ಕಶ್ಯಪ್ ಅವರಿಂದ. ಅಂದಹಾಗೆ, ಜೂನ್ 12ರ ತಡರಾತ್ರಿ ಬೈಕ್ನಲ್ಲಿ ಬರುವಾಗ ವಿಜಯ್ಗೆ ಅಪಘಾತವಾಗಿತ್ತು.
ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಅವರು ಕೋಮಗೆ ಜಾರಿದ್ದರು. ನಂತರ ವೈದ್ಯರು ಎಷ್ಟೇ ಪ್ರಯತ್ನಪಟ್ಟರು ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.
'ಸಂಚಾರಿ' ವಿಜಯ್ ಕುರಿತ ಊಹಾಪೋಹ ಸುದ್ದಿಗಳಿಗೆ ಸ್ಪಷ್ಟನೆ ಕೊಟ್ಟ ಸಹೋದರ ವಿರೂಪಾಕ್ಷ!