ಚೆನ್ನೈ : ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಮಾಹಿತಿ ನೀಡಿದೆ.
ಕೊರೊನಾ ಸೋಂಕಿಗೆ ಒಳಗಾದ ಅವರನ್ನು ಆ.5ರಂದು ಆಸ್ಪತ್ರೆಗೆ ದಾಖಲಾಗಿತ್ತು. ಕೆಲವು ದಿನಗಳ ಹಿಂದೆ ಚೇತರಿಸಿಕೊಂಡಿದ್ದ ಅವರ ಆರೋಗ್ಯ ಈಗ ಮತ್ತೆ ಚಿಂತಾಜನಕವಾಗಿದೆ. ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಬಾಲಸುಬ್ರಹ್ಮಣ್ಯ ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಮಧ್ಯಾಹ್ನ 12ಕ್ಕೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡುವುದಾಗಿ ವೈದ್ಯರು ಹೇಳಿದ್ದಾರೆ.
ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ಸಿನಿಮಾ ನಟರ ದಂಡು ದೌಡಾಯಿಸಿದೆ. ಈಗಾಗಲೇ ಕಮಲ್ ಹಾಸನ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದೆ ಎನ್ನಲಾಗಿದೆ.