Select Your Language

Notifications

webdunia
webdunia
webdunia
webdunia

ರಿಲೀಸ್‌ಗೂ ಮುನ್ನ ದೊಡ್ಡ ಮೊತ್ತಕ್ಕೆ ಒಟಿಟಿ ಪಾಲಾದ ಕಾಂತಾರ ಪ್ರೀಕ್ವೆಲ್‌

Kantara

Sampriya

ಬೆಂಗಳೂರು , ಗುರುವಾರ, 21 ಮಾರ್ಚ್ 2024 (10:34 IST)
Photo Courtesy X
ಬೆಂಗಳೂರು: ರಿಷಭ್‌ ಶೆಟ್ಟಿ ನಿರ್ದೇಶಿಸಿ, ನಾಯಕ ನಟನಾಗಿ ಅಭಿನಯಿಸಿದ ಕಾಂತಾರ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ದೊಡ್ಡ ಸದ್ದು ಮಾಡಿತ್ತು. ಇದೀಗ  ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣ ಕಾರ್ಯ ಆರಂಭವಾಗಿದೆ. ಈ ಮಧ್ಯೆ ಸಿನಿಮಾ ಬಿಡುಗಡೆಗೂ ಮುನ್ನವೇ ಚಿತ್ರವು ಒಟಿಟಿಗೆ ಮಾರಾಟವಾಗಿದೆ. ಸಿನಿಮಾ ಮೇಲಿನ ನಿರೀಕ್ಷೆಗೆ ತಕ್ಕಂತೆ ಬಹಳ ದೊಡ್ಡ ಮೊತ್ತಕ್ಕೆ ಡೀಲ್ ನಡೆದಿದೆ ಎನ್ನಲಾಗಿದೆ.

ರಿಷಭ್‌ ಶೆಟ್ಟಿ ಅವರೇ ಆಕ್ಷನ್‌ ಕಟ್‌ ಹೇಳುತ್ತಿರುವ ಈ ಸಿನಿಮಾವನ್ನು ದೊಡ್ಡ ಮೊತ್ತಕ್ಕೆ ಪ್ರೈಂ ವಿಡಿಯೊ ಖರೀದಿಸಿದ್ದು, ಮುಂಬೈನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ತಾನು ಖರೀದಿಸಿದ 29 ಸಿನಿಮಾಗಳ ಶೀರ್ಷಿಕೆಯನ್ನು ಪ್ರೈಂ ಘೋಷಿಸಿತು.  ಅದರಲ್ಲಿ ಕಾಂತಾರದ ಮೊದಲ ಅಧ್ಯಾಯನೂ ಸೇರಿದೆ.

ರಿಷಬ್‌ ಶೆಟ್ಟಿ ಹಾಗೂ ಚಿತ್ರದ ನಿರ್ಮಾಪಕ ವಿಜಯ್‌ ಕಿರಗಂದೂರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದ ವೇದಿಕೆಯಲ್ಲಿ ಕಾಂತಾರ ಚಿತ್ರದ ವರಾಹ ರೂಪಂ ಹಾಡಿಗೆ ಯಕ್ಷಗಾನ ಕಲಾವಿದರು ಪ್ರದರ್ಶನ ನೀಡಿದ ಬಳಿಕ, ಪ್ರೈಂ ತಂಡವು ಕಾಂತಾರ ಒಂದು ದಂತಕಥೆ ಅಧ್ಯಾಯ 1ರ ಬಿಡುಗಡೆಯನ್ನು ಘೋಷಿಸಿತು. ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭವಾಗಿದೆ. ಕದಂಬರ ಕಾಲದಲ್ಲಿ ನಡೆಯುವ ಕಥೆಯನ್ನು ಹೊಂದಿದೆ ಎನ್ನಲಾಗಿದೆ.

ಇದೇ ವೇಳೆ ಶಾಹಿದ್‌ ಕಪೂರ್‌ ನಟಿಸುತ್ತಿರುವ ಅಶ್ವತ್ಥಾಮ ದಿ ಸಾಗಾ ಕಂಟಿನ್ಯೂಸ್‌ ಸಿನಿಮಾವನ್ನೂ ಖರೀದಿಸಿದನ್ನು  ಪ್ರೈಂ ಘೋಷಿಸಿತು. ರಕ್ಷಿತ್‌ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರ ನಿರ್ದೇಶಿಸಿದ್ದ ಸಚಿನ್‌ ರವಿ ಈ ಸಿನಿಮಾಗೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.

ಕಾಂತಾರ ಪ್ರೀಕ್ವೆಲ್‌ ಹಾಗೂ ಅಶ್ವತ್ಥಾಮ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಬಳಿಕ ಪ್ರೈಂನಲ್ಲಿ ಲಭ್ಯವಾಗಲಿವೆ. ಇವುಗಳ ಜೊತೆಗೆ ಹಿಂದಿಯ ಹಿಟ್‌ ವೆಬ್‌ ಸರಣಿಗಳಾದ ಮಿರ್ಜಾಪುರ್‌ ಹಾಗೂ ಪಂಚಾಯತ್‌ನ ಮೂರನೇ ಚಾಪ್ಟರ್‌ಗಳನ್ನೂ ಪ್ರೈಂ ಘೋಷಿಸಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಅರುಂಧತಿ ಆರೋಗ್ಯ ಸ್ಥಿತಿ ಗಂಭೀರ: ಚಿಕಿತ್ಸೆಗೆ ಆರ್ಥಿಕ ಸಹಾಯ ಕೇಳಿದ ಕುಟುಂಬ