ಬಿಡುಗಡೆಯಾಗಿ ತಿಂಗಳಲ್ಲೇ ಓಟಿಟಿಗೆ ಬಂತು ವಿಜಯ್ ದೇವರಕೊಂಡ ಅಭಿನಯದ 'ದಿ ಫ್ಯಾಮಿಲಿ ಸ್ಟಾರ್' ಸಿನಿಮಾ

Sampriya
ಬುಧವಾರ, 24 ಏಪ್ರಿಲ್ 2024 (18:33 IST)
Photo Courtesy X
ತೆಲುಗಿನ ರೋಮ್ಯಾಂಟಿಕ್ ಫ್ಯಾಮಿಲಿ ಡ್ರಾಮಾ ಸ್ಟೋರಿಯಿರುವ 'ದಿ ಫ್ಯಾಮಿಲಿ ಸ್ಟಾರ್' ಶೀಘ್ರದಲ್ಲೇ ಓಟಿಟಿಗೆ ಬರಲಿದೆ. ವಿಜಯ್ ದೇವರಕೊಂಡ ಮತ್ತು ಮೃಣಾಲ್ ಠಾಕೂರ್ ನಟನೆಯ ದಿ ಫ್ಯಾಮಿಲಿ ಸ್ಟಾರ್ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಅಷ್ಟೇನೂ ಸದ್ದು ಮಾಡಿಲ್ಲ. ಇನ್ನೂ ಈ ಸಿನಿಮಾಗೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಸಿನಿಮಾ ಬಿಡುಗಡೆಯಾಗಿ 20 ದಿನ ಆಗುವಷ್ಟರಲ್ಲೇ ಓಟಿಟಿಗೆ ಬರುತ್ತಿದೆ.

ಇದೇ 26ರಿಂದ ಅಮೆಜಾನ್‌ನಲ್ಲಿ ಈ ಸಿನಿಮಾವನ್ನು ವೀಕ್ಷಣೆ ಮಾಡಬಹುದು. ಚಿತ್ರವು ಏಪ್ರಿಲ್ 26 ರಿಂದ ಭಾರತ ಮತ್ತು 240 ದೇಶಗಳು ಮತ್ತು ಪ್ರಾಂತ್ಯಗಳಲ್ಲಿ ತೆಲುಗು ಮತ್ತು ತಮಿಳಿನಲ್ಲಿ ಸ್ಟ್ರೀಮ್ ಆಗಲಿದೆ, ನಂತರ ಮಲಯಾಳಂ ಮತ್ತು ಕನ್ನಡದಲ್ಲಿ ಡಬ್ ಆಗುತ್ತದೆ.

ಇನ್ನೂ ದೇವರಕೊಂಡಗೆ  ಲೈಗರ್, ಖುಷಿ ಸಿನಿಮಾದ ನಂತರ ಫ್ಯಾಮಿಲಿ ಸ್ಟಾರ್ ಸಿನಿಮಾ ದೊಡ್ಡ ಸಕ್ಸಸ್ ನೀಡಲಿದೆ ಎಂದು ಹೇಳಲಾಗಿತ್ತು. ಆದರೆ ಈ ಸಿನಿಮಾ ವಿಒಜಯ್‌ ಅಷ್ಟೇನೋ ಒಳ್ಳೆಯ ಹೆಸರು ತಂದುಕೊಟ್ಟಿಲ್ಲ.

‘ಫ್ಯಾಮಿಲಿ ಸ್ಟಾರ್’ ಚಿತ್ರದ ಮೇಲೆ ಫ್ಯಾನ್ಸ್‌ಗೆ ನಿರೀಕ್ಷೆಯಿತ್ತು. ಈ ಸಿನಿಮಾ ವಿಜಯ್ ದೇವರಕೊಂಡ ಕೆರಿಯರ್‌ಗೆ ತಿರುವು ಕೊಡಲಿದೆ ಎಂದೇ ಹೇಳಲಾಗಿತ್ತು. ಆದರೆ ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಜಯ್ ದೇವರಕೊಂಡ ಮತ್ತು ಮೃಣಾಲ್ ಠಾಕೂರ್ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಪರಶುರಾಮ್ ಬರೆದು ನಿರ್ದೇಶಿಸಿದ್ದಾರೆ. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಮತ್ತು ಶಿರೀಷ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಮುಂದಿನ ಸುದ್ದಿ
Show comments