Select Your Language

Notifications

webdunia
webdunia
webdunia
webdunia

ಥಗ್‌ ಲೈಫ್‌ ಸಿನಿಮಾಕ್ಕೆ ರಾಜ್ಯದಲ್ಲಿ ನಿರ್ಬಂಧ ಹೇರಿಲ್ಲ: ಚಾಟಿ ಬೆನ್ನಲ್ಲೇ ಸುಪ್ರೀಂಗೆ ಸರ್ಕಾರದ ಪ್ರತಿಕ್ರಿಯೆ

Thugs of life

Sampriya

ಬೆಂಗಳೂರು , ಗುರುವಾರ, 19 ಜೂನ್ 2025 (14:32 IST)
ಬೆಂಗಳೂರು: ತಮಿಳಿನ  ಥಗ್‌ ಲೈಫ್‌ ಚಿತ್ರ ಬಿಡುಗಡೆಗೆ ರಾಜ್ಯ ಸರ್ಕಾರ ಯಾವುದೇ ನಿರ್ಬಂಧ ಹೇರಿಲ್ಲ. ನಿರ್ಮಾಪಕರು ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದರೆ, ಸರ್ಕಾರವು ತನ್ನ ಕರ್ತವ್ಯ  ನಿರ್ವಹಿಸಲಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸರ್ಕಾರ ಪ್ರತಿಕ್ರಿಯೆ ನೀಡಿದೆ. 

ಕಮಲ್ ಹಾಸನ್ ನಟನೆಯ ಥಗ್‌ ಲೈಫ್‌ ಸಿನಿಮಾ ಬಿಡುಗಡೆ ವಿಚಾರವಾಗಿ ಚಾಟಿ ಬೀಸಿದ್ದ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಪ್ರತಿಕ್ರಿಯೆ ನೀಡಿದೆ. ಸಿನಿಮಾ ಪ್ರದರ್ಶನಕ್ಕೆ ರಾಜ್ಯದ ಚಿತ್ರಮಂದಿರಗಳಲ್ಲಿ ಚ್ಯುತಿ ಬರದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಹೊಣೆ ಎಂದು ಜೂನ್ 17ರಂದು ಸುಪ್ರೀಂ ಕೋರ್ಟ್‌ ಹೇಳಿತ್ತು. 

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ ಪ್ರಮಾಣೀಕರಿಸಲ್ಪಟ್ಟ ಥಗ್‌ ಲೈಫ್‌ ಚಿತ್ರ ಬಿಡುಗಡೆಗೆ ರಾಜ್ಯ ಸರ್ಕಾರ ಯಾವುದೇ ನಿರ್ಬಂಧ ಹೇರಿಲ್ಲ. ಸಿನಿಮಾಗೆ ಸಂಬಂಧಿಸಿದವರು ಅಂದರೆ, ನಟರು, ನಿರ್ದೇಶಕರು, ನಿರ್ಮಾಪಕರು, ವಿತರಕರು ಹಾಗೂ ಪ್ರೇಕ್ಷಕರಿಗೆ ಸೂಕ್ತ ಭದ್ರತೆ ಒದಗಿಸುತ್ತದೆ ಎಂದು ಸರ್ಕಾರದ ಸುಪ್ರೀಂಗೆ ಮನವರಿಕೆ ಮಾಡಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ನಾಗರಿಕರ ಮೂಲಭೂತ ಹಕ್ಕುಗಳನ್ನು ಎತ್ತಿಹಿಡಿಯುವುದು ಹಾಗೂ ವಿವಾದದಲ್ಲಿ ಭಾಗಿಯಾಗಿರುವವರ ಹಕ್ಕುಗಳನ್ನು ರಕ್ಷಿಸುವುದು ತನ್ನ ಕರ್ತವ್ಯವಾಗಿದೆ ಎಂದು ರಾಜ್ಯ ಸರ್ಕಾರ ಪ್ರತಿಪಾದಿಸಿದೆ.

ಸಿನಿಮಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಟ ಕಮಲ್ ಹಾಸನ್‌, 'ಕನ್ನಡವು ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದರು. ಇದಕ್ಕೆ ರಾಜ್ಯದಾದ್ಯಂತ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ, ಕಮಲ್ ಕ್ಷಮೆಯಾಚಿಸಬೇಕೆಂಬ ಒತ್ತಾಯ ಬಲವಾಗಿ ಕೇಳಿ ಬಂದಿತ್ತು. ಸಿನಿಮಾ ಪ್ರದರ್ಶನಕ್ಕೆ ಕರ್ನಾಟಕದಲ್ಲಿ ಅವಕಾಶ ಕೊಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಪಷ್ಟವಾಗಿ ಹೇಳಿತ್ತು. ಹೀಗಾಗಿ, ರಾಜ್ಯದಲ್ಲಿ ಸಿನಿಮಾ ಬಿಡುಗಡೆಯಾಗಿರಲಿಲ್ಲ. ಆದ್ದರಿಂದ ಚಿತ್ರತಂಡ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. 

Share this Story:

Follow Webdunia kannada

ಮುಂದಿನ ಸುದ್ದಿ

ಸಹಾಯ ಮಾಡಲು ಹೋಗಿ ಮೋಸ: ಬೇಸರ ಹೊರಹಾಕಿದ ನಟ ಅನಿರುದ್ಧ ಜತ್ಕರ್