ಚಿರಂಜೀವಿಯವರ ಕೊರೊನಾ ಕ್ರೈಸಿಸ್ ಚಾರಿಟಿಯಿಂದ ಶುರುವಾಗಲಿದೆ ಹೊಸ ಯೋಜನೆ

Webdunia
ಬುಧವಾರ, 7 ಏಪ್ರಿಲ್ 2021 (11:18 IST)
ಹೈದರಾಬಾದ್ : ಕೊರನಾ ಹಾವಳಿಯಿಂದಾಗಿ ಇಡೀ ದೇಶವೇ ಲಾಕ್ ಡೌನ್ ಮಾಡಿದ್ದಾಗ ಚಲನಚಿತ್ರೋದ್ಯಮದ ಸಾವಿರಾರು ಜನರು ಉದ್ಯೋಗವಿಲ್ಲದೆ ಪರದಾಡಿದ್ದಾರೆ. ಅವರ  ಸಹಾಯಕ್ಕಾಗಿ ನಟ ಚಿರಂಜೀವಿ ಅವರು ಕೊರೊನಾ ಕ್ರೈಸಿಸ್ ಚಾರಿಟಿ(ಸಿಸಿಸಿ)ಯನ್ನು ಸ್ಥಾಪಿಸಿದ್ದರು.

ಇದೀಗ ಈ ಚಾರಿಟಿಯಲ್ಲಿ ಉಳಿದಿರುವ ಹಣದಿಂದ ಚಿತ್ರರಂಗದ ಕಾರ್ಮಿಕರಿಗೆ ಲಸಿಕೆ ನೀಡಲು ಬಳಸಲಾಗುತ್ತದೆ ಎಂದು ನಟ ಚಿರಂಜೀವಿ ಅವರು ಬಹಿರಂಗಪಡಿಸಿದ್ದಾರೆ. ಚಲನಚಿತ್ರ ಭ್ರಾತೃತ್ವದಿಂದ ಜನರಿಗೆ ಲಸಿಕೆ ನೀಡುವ ಪ್ರಕ್ರಿಯೆಯನ್ನು ಸಮಿತಿ ಶೀಘ್ರದಲ್ಲಿಯೇ ಪ್ರಾರಂಭಿಸುತ್ತದೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ಚಲನಚಿತ್ರ ಕಾರ್ಮಿಕರಿಗೆ ಲಸಿಕೆ ಹಾಕುವ ಜವಾಬ್ದಾರಿಯನ್ನು ಸಿಸಿಸಿ ಹೊಂದಿದೆ, ವ್ಯಾಕ್ಸಿನೇಷನ್ ಡ್ರೈವ್ ಗಾಗಿ ನಾವು ಕೆಲವು ಹನವನ್ನು ಮೀಸಲಿಟ್ಟಿದ್ದೇವೆ. ಈ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಶುರುಮಾಡುತ್ತೇವೆ ಎಂದು ತಿಳಿಸಿದ್ದಾರೆ. ಈ ಚಾರಿಟಿಗೆ  ಪ್ರಭಾಸ್, ಜೂನಿಯರ ಎನ್ ಟಿಆರ್, ನಾಗಾರ್ಜುನ್, ರಾಮ್ ಚರಣ್, ಸೇರಿದಂತೆ ಹಲವು ನಟರು ದೇಣಿಗೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments