Select Your Language

Notifications

webdunia
webdunia
webdunia
webdunia

ದರ್ಶನ್ ಅಭಿನಯದ 'ಡೆವಿಲ್' ಸಿನಿಮಾದ ಶೂಟಿಂಗ್ ಶುರು

Challenging Star Darshan Thugudeep Srinivas

Sampriya

ಬೆಂಗಳೂರು , ಮಂಗಳವಾರ, 19 ಮಾರ್ಚ್ 2024 (19:31 IST)
Photo Courtesy Facebook
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬದ ದಿನ(ಫೆ 16)ರಂದು ಅವರ ಮುಂಬರುವ ನಟನೆಯ ಡೆವಿಲ್ ಸಿನಿಮಾದ ಫಸ್ಟ್‌ ಲಿಕ್ ರಿವೀಲ್ ಆಗಿತ್ತು. ಅಬ್ಬರಿಸುವ ಡೈಲಾಗ್ ಮೂಲಕ ದಚ್ಚು ಎಂಟ್ರಿಗೆ ಅವರ ಅಭಿಮಾನಿಗಳು ಫಿದಾ ಆಗಿದ್ದರು. 
 
'ನಮ್ಮ ಮನೆಯಲೊಂದು ಪುಟ್ಟ ಪಾಪು ಇರುವುದು' ಎಂಬ ವಿಭಿನ್ನ ಡೈಲಾಗ್ ಹೇಳುವ ಮೂಲಕ ದರ್ಶನ್ ಉಗ್ರವಾಗಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಅಭಿಮಾನಿಗಳಲ್ಲಿ ನಿರೀಕ್ಷೆ ದುಪ್ಪಟ್ಟಾಗಿದೆ. ಮಾರ್ಚ್‌ನಿಂದ ಚಿತ್ರೀಕರಣ ಪ್ರಾರಂಭವಾಗುತ್ತದೆ ಎಂದಿದ್ದರು ದರ್ಶನ್. 
 
ಅದರಂತೆ ಇದೀಗ ಡೆವಿಲ್ ಸಿನಿಮಾ ಶೂಟಿಂಗ್ ಶುರುವಾಗಿದೆ.  ಈ ಸಿನಿಮಾವನ್ನು ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಲೋಕನಾಥ್ ಅವರು ಸಂಗೀತ ಸಂಯೋಜನೆ ಇರಲಿದೆ. ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ.
 
ದರ್ಶನ್ ಹುಟ್ಟುಹಬ್ಬದಂದು (ಫೆ.16) ಸಿನಿಮಾಗಳನ್ನು ತಮ್ಮ ಮುಂದಿನ ಸಿನಿಮಾವನ್ನು ಘೋಷಣೆಯನ್ನು ಮಾಡುವ ಮೂಲಕ ತಮ್ಮ ಅಭಿಮಾನಿಗಳಿಗೆ ಸಿಹಿನ ಸುದ್ದಿಯನ್ನು ನೀಡಿದ್ದರು. 

Share this Story:

Follow Webdunia kannada

ಮುಂದಿನ ಸುದ್ದಿ

ಮಹೇಶ್ ಬಾಬು, ರಾಜಮೌಳಿ ಸಿನಿಮಾಗೆ ಈ ಬಾಲಿವುಡ್ ಹೀರೋ ವಿಲನ್