Publish Date: Fri, 19 Jun 2026 (20:59 IST)
Updated Date: Fri, 19 Jun 2026 (21:02 IST)
ಬೆಂಗಳೂರು: ನಟ ರಿಷಬ್ ಶೆಟ್ಟಿ ಹೆಗಲಿಗೆ ರಾಜ್ಯ ಸರ್ಕಾರ ಹೊಸ ಜವಾಬ್ದಾರಿ ವಹಿಸಿದ್ದು, ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮ ಪ್ರಚಾರ ರಾಯಭಾರಿಯಾಗಿ ನೇಮಕ ಮಾಡಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಕರಾವಳಿ ಪ್ರವಾಸೋದ್ಯಮ ಸಭೆ ನಡೆಸಲಾಯಿತು.
ಸಭೆಯಲ್ಲಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಇನ್ನು 20 ದಿನದಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸಲು ಸರ್ಕಾರ ಚಿಂತನೆ ನಡೆಸಿದೆ.
ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿ ಪ್ರತ್ಯೇಕ ನೀತಿ ರಚನೆ ಮಾಡಲಾಗಿದೆ. ಪ್ರತ್ಯೇಕ ನೀತಿಯ ಬಗ್ಗೆ ಮಂಗಳೂರು ಸಚಿವ ಸಂಪುಟದಲ್ಲಿ ಚರ್ಚಿಸಿ ಸಿಎಂ ಒಪ್ಪಿಗೆ ಪಡೆಯಲಿದ್ದಾರೆ. ಇನ್ನೂ ಇದರ ಜತೆಗೆ ಹೋಂ ಸ್ಟೇಗಳಿಗೆ ತುಂಬಾ ನಿಯಮ ರೂಪಿಸಲಾಗುತ್ತಿದೆ. ಅವುಗಳನ್ನ ಸಡಿಲಗೊಳಿಸುವಂತೆ ಸೂಚಿಸಲು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ