ಸಿನಿಮಾ ಬಿಡುಗಡೆಗೆ ಕೆಲವೇ ದಿನವಿರುವಾಗ ಎರಡನೇ ಟೀಸರ್‌ ಬಿಟ್ಟ 'ಭೈರತಿ ರಣಗಲ್' ತಂಡ

Sampriya
ಶನಿವಾರ, 26 ಅಕ್ಟೋಬರ್ 2024 (19:12 IST)
Photo Courtesy X
ಬೆಂಗಳೂರು: ನಟ ಶಿವರಾಜ್‌ಕುಮಾರ್‌ ಅಭಿನಯದ ಬಹುನಿರೀಕ್ಷಿತ ಸಿನಿಮಾ ಭೈರತಿ ರಣಗಲ್ ಬಿಡುಗಡೆಗೆ ಸಿದ್ಧವಾಗಿರುವ ಹೊತ್ತಿನಲ್ಲಿ ಚಿತ್ರದ ಮತ್ತೊಂದು ಟೀಸರ್ ಅನಾವರವಾಗಿದ್ದು, ಭಾರೀ ಕುತೂಹಲ ಮೂಡಿಸಿದೆ.

ಇದೇ 15ರಂದು ಭೈರತಿ ರಣಗಲ್ ಸಿನಿಮಾ ಬಿಡುಗಡೆಯಾಗುತ್ತಿದ್ದು, ಈ ಸಿನಿಮಾಗೆ ನರ್ತನ್ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜ್‌ಕುಮಾರ್ ಅವರು ಸಿನಿಮಾಗೆ ಬಂಡವಾಳ ಹೂಡಿದ್ದಾರೆ.

ರುಕ್ಮಿಣಿ ವಸಂತ್‍, ರಾಹುಲ್ ಬೋಸ್‍, ಅವಿನಾಶ್‍ , ದೇವರಾಜ್‍, ಮಧು ಗುರುಸ್ವಾಮಿ, ಛಾಯಾ ಸಿಂಗ್‍, ಬಾಬು ಹಿರಣ್ಣಯ್ಯ ಸೇರಿದಂತೆ ದೊಡ್ಡ ತಾರಾ ಬಳಗವನ್ನು ಹೊಂದಿದೆ. ಚಿತ್ರಕ್ಕೆ ನವೀನ್ ಕುಮಾರ್ ಛಾಯಾಚಿತ್ರಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತವಿದೆ.

'ಭೈರತಿ ರಣಗಲ್‍' ಆರು ವರ್ಷಗಳ ಹಿಂದೆ ಬಿಡುಗಡೆಯಾದ 'ಮಫ್ತಿ' ಚಿತ್ರದ ಪ್ರೀಕ್ವೆಲ್‍. ಅಲ್ಲಿದ್ದ ಭೈರತಿ ರಣಗಲ್‍ನ ಸಣ್ಣ ಕಥೆಯನ್ನು ನಿರ್ದೇಶಕರು ಇಲ್ಲಿ ಬೆಳೆಸಿದ್ದಾರೆ. ಯಾಕೆ ಅವನು ಭೈರತಿ ರಣಗಲ್‍ ಆಗುತ್ತಾನೆ? ಜನರಿಗೆ ಯಾಕೆ ಅವನನ್ನು ಕಂಡರೆ ಅಷ್ಟು ಪ್ರೀತಿ ಎಂಬುದನ್ನು ಇಲ್ಲಿ ಹೇಳಲಾಗಿದೆ.

ಅಂದಹಾಗೆ ಗೀತಾ ಫಿಕ್ಚರ್ಸ್ ಸಂಸ್ಥೆಯ ಎರಡನೇ ಸಿನಿಮಾ ಬೈರತಿ ರಣಗಲ್ ಅಗಿದ್ದು, ನಿರೀಕ್ಷೆ ಹೆಚ್ಚಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಮುಂದಿನ ಸುದ್ದಿ
Show comments