Publish Date: Tue, 22 Dec 2020 (08:57 IST)
Updated Date: Tue, 22 Dec 2020 (08:59 IST)
ಚೆನ್ನೈ : ಲೋಕೇಶ್ ಕನಗರಾಜ್ ನಿರ್ದೇಶನದ ನಟ ವಿಜಯ್ ಹಾಗೂ ವಿಜಯ್ ಸೇತುಪತಿ ಅಭಿನಯದ ಮಾಸ್ಟರ್ ಚಿತ್ರದ ಟ್ರೈಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂಬುದಾಗಿ ತಿಳಿದುಬಂದಿದೆ.
ಮಾಸ್ಟರ್ ಚಿತ್ರದ ಟೀಸರ್ ದೀಪಾವಳಿಯಂದು ಬಿಡುಗಡೆಯಾಗಿ ಜನರ ಮೆಚ್ಚುಗೆ ಪಡೆದುಕೊಂಡಿತ್ತು. ಇದೀಗ ಮಾಸ್ಟರ್ ಚಿತ್ರದ ಟ್ರೈಲರ್ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಹೊಸ ವರ್ಷ 2021 ರಂದು ಮಧ್ಯಾಹ್ನ 12ಕ್ಕೆ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಇನ್ನೂ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಂದಿಲ್ಲ ಎನ್ನಲಾಗಿದೆ.