ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Sampriya
ಗುರುವಾರ, 12 ಜೂನ್ 2025 (14:31 IST)
Photo Courtesy X
ಬೆಂಗಳೂರು: ತನ್ನ ಬರ್ತ್‌ಡೇ ಪಾರ್ಟಿಯಲ್ಲಿ ಮಾದಕ ವಸ್ತುಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹುಭಾಷಾ ಖ್ಯಾತ ಗಾಯಕಿ ಮಂಗ್ಲಿ ಪ್ರತಿಕ್ರಿಯಿಸಿದ್ದಾರೆ. 

ರೆಸಾರ್ಟ್‌ವೊಂದರಲ್ಲಿ ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಮಾದಕ ವಸ್ತು ಪತ್ತೆಯಾಗಿತ್ತು. ಬುಧವಾರ ತಡರಾತ್ರಿ ಅನುಮತಿ ಪಡೆಯದೆ ಪಾರ್ಟಿ ನಡೆಸಲಾಗಿದೆ ಎಂಬ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಪರಿಣಾಮವಾಗಿ, ಮಂಗ್ಲಿ ಮತ್ತು ಇತರ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.  

ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಕಿ ಸ್ಪಷ್ಟನೆ ನೀಡಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಹಂಚಿಕೊಂಡಿದ್ದಾರೆ.  ಆತ್ಮೀಯರು ಮತ್ತು ಕುಟುಂಬದೊಂದಿಗೆ ಸಮಯ ಕಳೆಯುವ ಉದ್ದೇಶದಿಂದ ನಾನು ಬರ್ತ್‌ಡೇ ಪಾರ್ಟಿ ಆಯೋಜಿಸಿದ್ದೆ. ಇದು ನನ್ನ ಪೋಷಕರ ಇಚ್ಛೆಯಂತೆ ನಡೆಯಿತು. ಈ ಪಾರ್ಟಿಯಲ್ಲಿ ನನ್ನ ಕುಟುಂಬದ ಎಲ್ಲ ಸದಸ್ಯರು, ಸಂಬಂಧಿಕರು, ಸ್ನೇಹಿತರೂ ಹಾಜರಿದ್ರು. ಡ್ರಿಂಗ್ಸ್‌ ಮತ್ತು ಸಾಂಗ್‌ ವ್ಯವಸ್ಥೆ ಕೂಡ ಮಾಡಲಾಗಿತ್ತು. ಆದ್ರೆ ಇವುಗಳಿಗೆ ಅನುಮತಿ ಅಗತ್ಯವಿದೆ ಅನ್ನೋದು ನನಗೆ ಗೊತ್ತಿರಲಿಲ್ಲ ಎಂದು ಹೇಳಿದ್ದಾರೆ.

ರೆಸಾರ್ಟ್‌ನಲ್ಲಿ ಹಠಾತ್ತನೆ ಪಾರ್ಟಿ ಮಾಡಲಾಗಿತ್ತು. ಯಾರಾದ್ರೂ ನನಗೆ ಮಾಹಿತಿ ಕೊಟ್ಟಿದ್ದರೆ ಖಂಡಿತವಾಗಿ ಬೇಕಾದ ಅನುಮತಿ ಪಡೆದುಕೊಳ್ಳುತ್ತಿದೆ. ಯಾರೊಬ್ಬರೂ ಅನುಮತಿ ಅಗತ್ಯ ಅಂತ ನನಗೆ ಹೇಳಲಿಲ್ಲ. ನಾನು ತಿಳಿದೂ ತಿಳಿದೂ ಯಾವುದೇ ತಪ್ಪು ಮಾಡಿಲ್ಲ ಎಂದು ವಿಡಿಯೊ ಮೂಲಕ ಹೇಳಿದ್ದಾರೆ.

ಆ ರೆಸಾರ್ಟ್‌ನಲ್ಲಿ ಸ್ಥಳೀಯ ಮದ್ಯ (ಲೋಕಲ್‌ ಡ್ರಿಂಕ್ಸ್‌) ಮಾತ್ರ ಇತ್ತು. ಬೇರೆ ಯಾವುದೇ ಮಾದಕ ವಸ್ತುಗಳು ಬಳಸಿರಲಿಲ್ಲ ಅಥವಾ ಕಂಡುಬಂದಿಲ್ಲ. ಪೊಲೀಸರು ಶೋಧ ನಡೆಸಿದಾಗಲೂ ಯಾವುದೇ ಅಕ್ರಮ ವಸ್ತುಗಳು ಪತ್ತೆಯಾಗಿಲ್ಲ. ಗಾಂಜಾ ಸೇವಿಸಿದ್ದ ವ್ಯಕ್ತಿ ಬೇರೆಡೆ ಮತ್ತು ಬೇರೆ ಸಮಯದಲ್ಲಿ ಸೇವಿಸಿದ್ದಾನೆ ಅನ್ನೋದನ್ನ ಪೊಲೀಸರೇ ಖಚಿತಪಡಿಸಿದ್ದಾರೆ. ದಯವಿಟ್ಟು ಸಾಕ್ಷ್ಯಗಳಿಲ್ಲದೇ ನನ್ನ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ