Webdunia - Bharat's app for daily news and videos

Install App

ರೇಣುಕಾಸ್ವಾಮಿ ಪ್ರಕರಣದಲ್ಲಿ ಇನ್ನೂ ಬಿಡುಗಡೆ ಭಾಗ್ಯದ ಸಿಗದ ಆರೋಪಿಗಳು ಇವರೇ

Sampriya
ಶುಕ್ರವಾರ, 13 ಡಿಸೆಂಬರ್ 2024 (19:42 IST)
Photo Courtesy X
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು 7 ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದ್ದು, ಇನ್ನೂ 6 ಆರೋಪಿಗಳಿಗೆ ಜೈಲೇ ಗತಿಯಾಗಿದೆ.

ಪ್ರಕರಣ ಸಂಬಂಧ ಇಂದು ನಟ ದರ್ಶನ್, ಪವಿತ್ರಾ ಗೌಡ, ಆರ್‌. ನಾಗರಾಜು, ಎಂ.ಲಕ್ಷ್ಮಣ್‌, ಅನು ಕುಮಾರ್‌ ಅಲಿಯಾಸ್, ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಷ್‌ ರಾವ್ ಅವರು ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದ್ದು, ಬಿಗ್‌ ರಿಲೀಫ್ ಸಿಕ್ಕಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿ ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮಧ್ಯಾಹ್ನ ತೀರ್ಪು ಪ್ರಕಟಿಸಿದೆ.

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್‌, ಪವಿತ್ರಾ ಗೌಡ ಸೇರಿ ಒಟ್ಟು 17 ಆರೋಪಿಗಳು ಜೈಲು ಸೇರಿದ್ದರು. ಇನ್ನೂ ಪ್ರಕರಣದ ಆರೋಪಿಯಾದ ಕೇಶವಮೂರ್ತಿಗೆ ಸೆಪ್ಟೆಂಬರ್‌ 24ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದೇ ದಿನ 15 ಹಾಗೂ 17ನೇ ಆರೋಪಿಗಳಾದ ಕಾರ್ತಿಕ್ ಹಾಗೂ ನಿಖಿಲ್ ನಾಯಕ್ ಅವರಿಗೆ 57ನೇ ಸಿಸಿಎಚ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಆದರೆ 17ಆರೋಪಿಗಳಲ್ಲಿ ಇನ್ನು ಹಲವರು ಜಾಮೀನು ಸಿಗದೆ ಜೈಲಿನಲ್ಲಿಯೇ ಇದ್ದಾರೆ.  ಪ್ರಕರಣದ ಮೂರನೇ ಆರೋಪಿಯಾದ ಪವನ್ ಕೆ. ಅಲಿಯಾಸ್‌ ಪುಟ್ಟಸ್ವಾಮಿ, 4ನೇ ಆರೋಪಿ ರಾಘವೇಂದ್ರ ಅಲಿಯಾಸ್‌ ನಾಗರಾಜ್, 8ನೇ ಆರೋಪಿ ರವಿಶಂಕರ್ ಅಲಿಯಾಸ್‌ ರವಿ 9ನೇ ಆರೋಪಿ ಧನರಾಜ್‌ ಅಲಿಯಾಸ್‌ ರಾಜು, 10ನೇ ಆರೋಪಿ ವಿನಯ್ ಅಲಿಯಾಸ್‌ ವೆಂಕಟರೆಡ್ಡಿ, 13ನೇ ಆರೋಪಿ ದೀಪಕ್‌ ಅವರಿಗೆ ಜಾಮೀನು ಸಿಕ್ಕಿಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments