ನವದೆಹಲಿ: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್ ಸೇರಿದಂತೆ ಎಲ್ಲರ ಭವಿಷ್ಯ ಇದೀಗ ಸುಪ್ರೀಂ ಕೋರ್ಟ್ ಮೇಲಿದೆ.
ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇಂದು ಅದರ ವಿಚಾರಣೆ ನಡೆದಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ.
ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು ದರ್ಶನ್ ಹಾಗೂ ಪವಿತ್ರಾ ಗೌಡ ಲಿವಿಂಗ್ ರಿಲೇಷನ್‌ನಲ್ಲಿದ್ದರು ಎಂದು ಹೇಳಿದ್ದಾರೆ.
ದರ್ಶನ್ ಹಾಗೂ ಪವಿತ್ರಾ ಗೌಡ ಲಿವಿಂಗ್ ರಿಲೇಷನ್‌ನಲ್ಲಿದ್ದರು. ಹೀಗಾಗಿ ರೇಣುಕಾಸ್ವಾಮಿ ಅಸಭ್ಯವಾಗಿ ಪವಿತ್ರಾ ಗೌಡ ಮೆಸೇಜ್ ಕಳುಹಿಸಿದ್ದ. ಈ ವಿಚಾರ ತಿಳಿದು ದರ್ಶನ್ ತನ್ನ ಸ್ನೇಹಿತರು, ಅಭಿಮಾನಿ ಸಂಘದ ಸದಸ್ಯರನ್ನ ಬಳಸಿಕೊಂಡು ಹತ್ಯೆ ಮಾಡಿದ್ದಾರೆ ಅಂತ ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂಥ್ರಾ ಪ್ರಬಲ ವಾದ ಮಂಡಿಸಿದರು.
ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನ್ಯಾ.ಪಾರ್ದಿವಾಲಾ ನೇತೃತ್ವದ ದ್ವಿ-ಸದಸ್ಯ ಪೀಠದಲ್ಲಿ ನಡೆಸಿತು. ಈ ವೇಳೆ ಸುಮಾರು 1 ಗಂಟೆ ಪ್ರಬಲ ವಾದ ಮಂಡಿಸಿದ ಸಿದ್ಧಾರ್ಥ್ ಲೂಥ್ರಾ ಅವರು ಹಲವು ವಿಷಯಗಳನ್ನ ಕೋರ್ಟ್ ಗಮನಕ್ಕೆ ತಂದರು.