ಮುಂಬೈ: ಸಿನಿಮಾ ಚಿತ್ರೀಕರಣಕ್ಕೆ ಸೆಟ್‌ಗೆ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಬಂದ ವ್ಯಕ್ತಿಯೊಬ್ಬ ಸಲ್ಮಾನ್ ಖಾನ್ ಅಂಗರಕ್ಷಕನಿಗೆ ಬೆದರಿಕೆ ಹಾಕಿದ ಕಾರಣ, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಮುಂಬೈನ ಶಿವಾಜಿ ಪಾರ್ಕ್ ಬಳಿ ಸಲ್ಮಾನ್ ಖಾನ್ ಅವರ ಮುಂದಿನ ಸಿನಿಮಾ ಚಿತ್ರೀಕರಣಕ್ಕೆ ಸೆಟ್ ಹಾಕಲಾಗಿತ್ತು. ಈ ವೇಳೆ ಜ್ಯೂನಿಯರ್ ಕಲಾವಿದ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಸೆಟ್ ಒಳಗೆ ಪ್ರವೇಶಿಸಿದ್ದ.
ಈ ವೇಳೆ ಅಂಗರಕ್ಷಕರೊಬ್ಬರು ಆತನನ್ನು ತಡೆದಿದ್ದಾರೆ. ಇಬ್ಬರ ಮಧ್ಯೆ ವಾಗ್ವಾದ ನಡೆದಿದ್ದು, ಆತ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರನ್ನು ಹೇಳಿ ಬೆದರಿಕೆ ಹಾಕಿದ್ದಾನೆ. ವಾಗ್ವದ ಗಮನಿಸಿದ ಸ್ಥಳದಲ್ಲಿದ್ದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ನಡೆಯುವ ಸಂದರ್ಭದಲ್ಲಿ ಸಲ್ಮಾನ್ ಖಾನ್ ಅವರು ಸೆಟ್‌ನಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.