Publish Date: Sat, 30 Oct 2021 (14:11 IST)
Updated Date: Sat, 30 Oct 2021 (14:13 IST)
ಸ್ಯಾಂಡಲ್ವುಡ್ ನಟ, ಅಭಿಮಾನಿಗಳಿಂದ ಅಪ್ಪು ಎಂದು ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜಕುಮಾರ್ ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪುನೀತ್ ನಿಧನಕ್ಕೆ ದೇಶವೇ ಕಂಬನಿ ಮಿಡಿದಿದ್ದು, ಅಭಿಮಾನಿಗಳು ತೀವ್ರ ಶೋಕದಲ್ಲಿ ಮುಳುಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಹಾಗೂ ಪಾರ್ವತಮ್ಮ ಸಮಾಧಿ ಪಕ್ಕದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಪುನೀತ್ ನಿಧನಕ್ಕೆ ದೇಶದ ವಿವಿಧ ಭಾಷೆಗಳ ಚಿತ್ರರಂಗಗಳು, ಕಲಾವಿದರು ಸಂತಾಪ ಸೂಚಿಸಿದ್ದಾರೆ. ಇಂದು ಅಂತಿಮ ದರ್ಶನ ಪಡೆಯಲು ಟಾಲಿವುಡ್ ನಟರು ಆಗಮಿಸುವ ನಿರೀಕ್ಷೆ ಇದೆ. ರಾಜ್ಯದ ವಿವಿದೆಡೆಯಿಂದ ಅಭಿಮಾನಿಗಳು ಆಗಮಿಸುತ್ತಿದ್ದು, ಕಂಠೀರವ ಸ್ಟೇಡಿಯಂ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರೈಲ್ವೆ ನಿಲ್ದಾಣ, ಮೆಜೆಸ್ಟಿಕ್ಗಳಲ್ಲೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.