ಬೆಂಗಳೂರು : ‘ಪುನೀತ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪ ಎದುರಾಗಿದೆ. ನವೆಂಬರ್ 16ರಂದು ಫಿಲ್ಮ್ ಚೇಂಬರ್ ಏರ್ಪಡಿಸಿರುವ ಕಾರ್ಯಕ್ರಮಕ್ಕೆ ವೈಯಕ್ತಿಕವಾಗಿ ಖಾತೆಗೆ ಹಣ ಹಾಕಿಸಿಕೊಳ್ಳುತ್ತಿರುವ ಆರೋಪ ಎದುರಾಗಿದೆ.
ಈ ಕುರಿತು ಫಿಲ್ಮ್ ಚೇಂಬರ್ ವಿರುದ್ಧ ಜೆ.ಜೆ ಶ್ರೀನಿವಾಸ್, ಕುಮಾರ್ ಸೇರಿದಂತೆ ಕೆಲವು ಸದಸ್ಯರು ಅಸಮಾಧಾನ ಹೊರಹಾಕಿದ್ದಾರೆ. ‘‘ಫಿಲ್ಮ್ ಚೇಂಬರ್ನ ಖಾತೆಗೆ ಹಣವನ್ನು ಹಾಕಿಸಿಕೊಳ್ಳುತ್ತಿಲ್ಲ. ತಮ್ಮ ಹೆಸರಿನಲ್ಲಿ ಚೆಕ್ ಪಡೆದು, ತಮ್ಮ ವೈಯಕ್ತಿಕ ಅಕೌಂಟ್ ಗೆ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ. ಅದರ ಲೆಕ್ಕ ಹೇಗೆ ಸಿಗುತ್ತದೆ? ಒಬ್ಬ ಮೇರು ನಟನಿಗೆ ನುಡಿನಮನ ಸಲ್ಲಿಸಲು ಫಿಲ್ಮ್ ಚೇಂಬರ್ ಬಳಿ ಹಣ ಇಲ್ಲದಿದ್ದರೆ ನಾವು ಸದಸ್ಯರೇ ಸೇರಿ ಹಣ ಕೊಡುತ್ತೇವೆ’’ ಎಂದು ಕೆಲ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್ ಪ್ರತಿಕ್ರಿಯಿಸಿದ್ದು, ಆರೋಪವನ್ನು ತಳ್ಳಿ ಹಾಕಿದ್ದಾರೆ.