Select Your Language

Notifications

webdunia
webdunia
webdunia
webdunia

ಮೊದಲ ಬಾರಿಗೆ ಇಲ್ಲಿ ಬಿಡುಗಡೆಯಾಗಲಿದೆಯಂತೆ ವಿಜಯ್ ‘ಮಾಸ್ಟರ್’ ಚಿತ್ರ

ಮೊದಲ ಬಾರಿಗೆ ಇಲ್ಲಿ ಬಿಡುಗಡೆಯಾಗಲಿದೆಯಂತೆ ವಿಜಯ್ ‘ಮಾಸ್ಟರ್’ ಚಿತ್ರ
ಚೆನ್ನೈ , ಮಂಗಳವಾರ, 29 ಡಿಸೆಂಬರ್ 2020 (13:52 IST)
ಚೆನ್ನೈ : ಲೋಕೇಶ್ ಕನಗರಾಜ್ ನಿರ್ದೇಶನದ ಮಾಸ್ಟರ್ ಚಿತ್ರದಲ್ಲಿ ನಟ ವಿಜಯ್ ಹಾಗೂ ನಟ ವಿಜಯ್ ಸೇತುಪತಿ ಅವರು ಜೊತೆಯಾಗಿ ನಟಿಸಿದ್ದಾರೆ.

ಈಗಾಗಲೇ ಬಿಡುಗಡೆಯಾಗಬೇಕಿದ್ದ ಚಿತ್ರ ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿದೆ. ಆದರೆ ಈ ಚಿತ್ರವನ್ನು ಮುಂದಿನ ತಿಂಗಳು ಸಂಕ್ರಾಂತಿಯಂದು ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಈ  ನಡುವೆ ಇದೀಗ ಮಾಸ್ಟರ್ ಚಿತ್ರದ ಬಗ್ಗೆ ಹೊಸ ಮಾಹಿತಿ ಬಿಡುಗಡೆ ಮಾಡಲಾಗಿದೆ.

ಅದೇನೆಂದರೆ ‘ಮಾಸ್ಟರ್’ ಚಿತ್ರವು ಆಸ್ಟ್ರೇಲಿಯಾದಲ್ಲಿ ಮೊದಲ ಬಾರಿಗೆ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಹಾಗೇ ದೇಶದ 60 ಸ್ಥಳಗಳಲ್ಲಿ ಮೊದಲ ಬಾರಿಗೆ ಬಿಡುಗಡೆಯಾದ ತಮಿಳು ಚಿತ್ರ ಎಂಬ ಹೆಗ್ಗಳಿಕೆ ಪಡೆದುಕೊಳ್ಳಲಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದಳಪತಿ ವಿಜಯ್ ಬಗ್ಗೆ ನಟ ಯಶ್ ಹೇಳಿದ್ದೇನು?