ದರ್ಶನ್ ಮತ್ತು ಗ್ಯಾಂಗ್ ಬೇರೆ ಜೈಲಿಗೆ: ಇಂದು ಕೋರ್ಟ್ ತೀರ್ಮಾನ

Krishnaveni K
ಸೋಮವಾರ, 24 ಜೂನ್ 2024 (09:56 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೀಡಾಗಿರುವ ನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ವರ್ಗಾಯಿಸುವ ಕುರಿತಂತೆ ಇಂದು ಕೋರ್ಟ್ ತನ್ನ ತೀರ್ಮಾನ ಪ್ರಕಟಿಸಲಿದೆ.

ಭದ್ರತೆ ಮತ್ತು ಆರೋಪಿಗಳು ಪಿತೂರಿ ಮಾಡುವ ಸಾಧ್ಯತೆಯಿದೆ ಎಂಬ ಕಾರಣಕ್ಕೆ ಆರೋಪಿಗಳನ್ನು ಒಂದೇ ಜೈಲಿನಲ್ಲಿ ಇರಿಸುವುದು ಬೇಡ ಎಂದು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದಕ್ಕೆ ಆರೋಪಿಗಳ ಪರ ಲಾಯರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸೋಮವಾರ ತೀರ್ಪು ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿತ್ತು.

ಅದರಂತೆ ಇಂದು ದರ್ಶನ್ ಆಂಡ್ ಗ್ಯಾಂಗ್ ಗೆ ಮತ್ತೆ ಮಹತ್ವದ ದಿನವಾಗಿರಲಿದೆ. ಈಗಾಗಲೇ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನಲ್ಲಿದ್ದಾರೆ.  ಎಲ್ಲಾ ಆರೋಪಿಗಳನ್ನೂ ಪ್ರತ್ಯೇಕವಾಗಿರಿಸಲಾಗಿದೆ.

ಈ ಎಲ್ಲಾ ಆರೋಪಿಗಳೂ ಒಟ್ಟಿಗೇ ಇದ್ದರೆ ಪಿತೂರಿ ನಡೆಸಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಕರಣ ಈಗ ನಿರ್ಣಾಯಕ ಹಂತದಲ್ಲಿದ್ದು, ಈ ಹಂತದಲ್ಲಿ ಆರೋಪಿಗಳಿಗೆ ಪರಸ್ಪರ ಚರ್ಚೆಗೆ ಅವಕಾಶ ಕೊಡಬಾರದು ಎಂಬ ಕಾರಣಕ್ಕೆ ಬೇರೆ ಜೈಲಿಗೆ ವರ್ಗಾಯಿಸಲು ಅವಕಾಶ ಕೋರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

OG ನಟನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನಟ, ಡಿಸಿಎಂ ಪವನ್ ಕಲ್ಯಾಣ್

ಮುಂದಿನ ಸುದ್ದಿ
Show comments