Publish Date: Tue, 16 Nov 2021 (07:23 IST)
Updated Date: Tue, 16 Nov 2021 (08:25 IST)
ನಟ ಪುನೀತ್ ರಾಜ್ಕುಮಾರ್ ಅವರಿಗೆ ಚಿತ್ರರಂಗದ ಪರವಾಗಿ ನಮನ ಸಲ್ಲಿಸುವ ಉದ್ದೇಶದಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ಪುನೀತ ನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಚಿತ್ರರಂಗದ ಎಲ್ಲಾ ಗಣ್ಯರು ಭಾಗವಹಿಸಬೇಕು ಎಂಬ ಉದ್ದೇಶದಿಂದ ಇಂದು, ಚಿತ್ರ ಪ್ರದರ್ಶನ ಹೊರತುಪಡಿಸಿ, ಚಿತ್ರೋದ್ಯಮದ ಮತ್ತೆಲ್ಲಾ ಕೆಲಸಗಳಿಗೆ ರಜೆ ಘೋಷಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕಾರ್ಯಕ್ರಮ ಆರಂಭವಾಗಲಿದ್ದು, ಸಕಲ ಸಿದ್ಧತೆ ಮಾಡಲಾಗಿದೆ. ದಕ್ಷಿಣ ಭಾರತದ ಖ್ಯಾತ ಕಲಾವಿದರು, ರಾಜಕೀಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಡಾ.ರಾಜ್ಕುಮಾರ್ ಕುಟುಂಬ ಭಾಗಿಯಾಗಲಿದ್ದು, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಕುಟುಂಬದವರು ಪುನೀತ ನಮನದಲ್ಲಿ ಉಪಸ್ಥಿತರಿರಲಿದ್ದಾರೆ. ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದ್ದು, 2000 ಜನ ಭಾಗವಹಿಸುವ ನಿರೀಕ್ಷೆ ಇದೆ.