Publish Date: Sat, 17 Mar 2018 (08:54 IST)
Updated Date: Sat, 17 Mar 2018 (08:57 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಶನಿವಾರ(ಇಂದು) ತಮ್ಮ 43ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ಮನೆಯ ಮುಂದೆ ನೆರೆದಿದ್ದ ಅಭಿಮಾನಿಗಳ ಸಮ್ಮುಖದಲ್ಲಿ ಅವರ ತಂದ ಕೇಕ್ ಅನ್ನು ಕತ್ತರಿಸುವುದರ ಮೂಲಕ ಪುನೀತ್ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಪುನೀತ್ ಅವರ ತಾಯಿ ಪಾರ್ವತಮ್ಮ ರಾಜ್ ಕುಮಾರ್ ಅವರು ನಿಧನದ ಹಿನ್ನಲೆಯಲ್ಲಿ ಹುಟ್ಟುಹಬ್ಬವನ್ನು ಆಚರಣೆ ಮಾಡಬಾರದೆಂದು ನಿರ್ಧರಿಸಿದ್ದರೂ ಅಭಿಮಾನಿಗಳ ಒತ್ತಾಯದ ಮೇರೆಗೆ ಆಚರಣೆ ಮಾಡಿದ್ದಾರೆ.
ಪುನೀತ್ ಅವರು ನಟಿಸುತ್ತಿರುವ ‘ನಟಸಾರ್ವಭೌಮ’ ಚಿತ್ರತಂಡ ಕೂಡ ಪುನೀತ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ರಾತ್ರಿ 12 ಗಂಟೆಗೆ ‘ನಟಸಾರ್ವಭೌಮ’ ಚಿತ್ರದ ಫಸ್ಟ್ ಟೀಸರ್ ರಿಲೀಸ್ ಮಾಡಿ ಸರ್ಫ್ರೈಸ್ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ