ಬೆಂಗಳೂರು: ಕನ್ನಡದ ಖ್ಯಾತ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ಖಾಸಗಿ ವಿಡಿಯೋ ವೈರಲ್ ಬೆನ್ನಲ್ಲೇ ಇದೀಗ ನಟಿ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದಾರೆ. ದೂರಿನಲ್ಲಿ ನಟಿ ಮಾರ್ಫಿಂಗ್ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಇನ್ನೂ ದೂರಿನಲ್ಲಿ ನಟಿ ತನ್ನ ಮಾನ ಮತ್ತು ಕುಟುಂಬದ ಗೌರವ ಅಪಾಯದಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
ನಟಿ ನೀಡಿದ ದೂರಿನಲ್ಲಿ ಹೀಗಿದೆ: ಮಾನ ಹಾಗೂ ಕುಟುಂಬದ ಗೌರವ ಅಪಾಯದಲ್ಲಿದೆ. ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ನನ್ನ ಜೀವನದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ ಎಂದು ದೂರಿನಲ್ಲಿ ನಟಿ ಕಳವಳ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ಅಕೌಂಟ್‌ಗಳಿಂದ ನನಗೆ ಡೌನ್‌ಲೋಡ್ ಮಾಡಲಾದ ನಗ್ನ ಹಾಗೂ ಅಶ್ಲೀಲ ಚಿತ್ರಗಳನ್ನು ಮಾರ್ಫಿಂಗ್ ಮಾಡಿ ನನ್ನ ಇನ್‌ಬಾಕ್ಸ್‌ಗೆ ಕಳುಹಿಸುತ್ತಿದ್ದಾರೆ. ನನ್ನ ಇನ್ಸ್ಟಾಗ್ರಾಂ ಸ್ಟೋರಿಗಳಲ್ಲಿ ಹಾಕಲಾದ ಫೋಟೋಗಳನ್ನು ಬಳಸಿ ಮಾರ್ಫಿಂಗ್ ಮಾಡಲಾಗಿದೆ. ನನಗೆ ಕಿರುಕುಳ ನೀಡುವ ಮತ್ತು ನನ್ನ ಮಾನಹಾನಿ ಮಾಡುವ ಉದ್ದೇಶದಿಂದಲೇ ಈ ರೀತಿ ಮಾಡಲಾಗಿದೆ ಎಂದು ದೂರಿದ್ದಾರೆ.
ಈ ಸಂಬಂಧ ಕ್ರೈಂ ವಿಭಾಗಕ್ಕೆ ದೂರು ಸಲ್ಲಿಸಿದ್ದೇನೆ. ನನ್ನ ಕುಟಂಬದವರ ಮಾನ ಹರಾಜು ಹಾಕುವವರಿಗೆ ಖಂಡಿತಾ ಕಠಿಣ ಶಿಕ್ಷೆ ಆಗತ್ತೆ ಎಂದು ಜ್ಯೋತಿ ರೈ ಕಿಡಿಗೇಡಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.