Webdunia - Bharat's app for daily news and videos

Install App

ನಗ್ನ, ಅಶ್ಲೀಲ ಫೋಟೋ ಕಳುಹಿಸಿ ಟಾರ್ಚರ್: ಸೈಬರ್ ಕ್ರೈಂಗೆ ದೂರು ನೀಡಿದ ಜ್ಯೋತಿ ರೈ

ನಗ್ನ  ಅಶ್ಲೀಲ ಫೋಟೋ ಕಳುಹಿಸಿ ಟಾರ್ಚರ್: ಸೈಬರ್ ಕ್ರೈಂಗೆ ದೂರು ನೀಡಿದ ಜ್ಯೋತಿ ರೈ
Sampriya
ಗುರುವಾರ, 9 ಮೇ 2024 (19:27 IST)
photo Courtesy Instagram
ಬೆಂಗಳೂರು: ಕನ್ನಡದ ಖ್ಯಾತ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ಖಾಸಗಿ ವಿಡಿಯೋ ವೈರಲ್ ಬೆನ್ನಲ್ಲೇ ಇದೀಗ ನಟಿ  ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದಾರೆ. ದೂರಿನಲ್ಲಿ ನಟಿ ಮಾರ್ಫಿಂಗ್ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಇನ್ನೂ ದೂರಿನಲ್ಲಿ ನಟಿ ತನ್ನ ಮಾನ ಮತ್ತು ಕುಟುಂಬದ ಗೌರವ ಅಪಾಯದಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ನಟಿ ನೀಡಿದ ದೂರಿನಲ್ಲಿ ಹೀಗಿದೆ:  ಮಾನ ಹಾಗೂ ಕುಟುಂಬದ ಗೌರವ ಅಪಾಯದಲ್ಲಿದೆ. ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ನನ್ನ ಜೀವನದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ ಎಂದು ದೂರಿನಲ್ಲಿ ನಟಿ ಕಳವಳ ವ್ಯಕ್ತಪಡಿಸಿದ್ದಾರೆ.‌


ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ಅಕೌಂಟ್‌ಗಳಿಂದ ನನಗೆ  ಡೌನ್‌ಲೋಡ್ ಮಾಡಲಾದ ನಗ್ನ ಹಾಗೂ ಅಶ್ಲೀಲ ಚಿತ್ರಗಳನ್ನು ಮಾರ್ಫಿಂಗ್ ಮಾಡಿ ನನ್ನ ಇನ್‌ಬಾಕ್ಸ್‌ಗೆ ಕಳುಹಿಸುತ್ತಿದ್ದಾರೆ. ನನ್ನ ಇನ್ಸ್ಟಾಗ್ರಾಂ ಸ್ಟೋರಿಗಳಲ್ಲಿ ಹಾಕಲಾದ ಫೋಟೋಗಳನ್ನು ಬಳಸಿ ಮಾರ್ಫಿಂಗ್ ಮಾಡಲಾಗಿದೆ. ನನಗೆ ಕಿರುಕುಳ ನೀಡುವ ಮತ್ತು ನನ್ನ ಮಾನಹಾನಿ ಮಾಡುವ ಉದ್ದೇಶದಿಂದಲೇ ಈ ರೀತಿ ಮಾಡಲಾಗಿದೆ ಎಂದು ದೂರಿದ್ದಾರೆ.

ಈ ಸಂಬಂಧ ಕ್ರೈಂ ವಿಭಾಗಕ್ಕೆ ದೂರು ಸಲ್ಲಿಸಿದ್ದೇನೆ. ನನ್ನ ಕುಟಂಬದವರ ಮಾನ ಹರಾಜು ಹಾಕುವವರಿಗೆ ಖಂಡಿತಾ ಕಠಿಣ ಶಿಕ್ಷೆ ಆಗತ್ತೆ ಎಂದು ಜ್ಯೋತಿ ರೈ ಕಿಡಿಗೇಡಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ