Publish Date: Wed, 10 Jan 2018 (06:19 IST)
Updated Date: Wed, 10 Jan 2018 (06:46 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ಚಿರಂಜೀವಿ ಸರ್ಜಾ ಅವರ ಅಭಿನಯದ ‘ಸೀಜರ್’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ ನಲ್ಲಿ ಬಾರಿ ಹವಾ ಕ್ರಿಯೆಟ್ ಮಾಡುತ್ತಿದೆ.
ಈ ಸಿನಿಮಾದಲ್ಲಿ ನಟ ಚಿರಂಜೀವಿ ಸರ್ಜಾ ಅವರ ಜೊತೆ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಕೂಡ ಅಭಿನಯಿಸಿದ್ದಾರೆ. ಪರೂಲ್ ಯಾದವ್ ಅವರು ನಾಯಕಿಯಾಗಿ ನಟಿಸಿದರೆ, ಪ್ರಕಾಶ್ ರಾಜ್ ಅವರು ಖಳ ನಾಯಕನ ಪಾತ್ರದಲ್ಲಿ ಮಿಂಚಿದ್ದಾರೆ. ಹಾಗೆ ಶೋಭ ರಾಜ್, ರಮೇಶ್ ಭಟ್ ಮುಂತಾದವರು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದ ನಿರ್ಮಾಪಕರಾದ ವಿನಯ್ ಕೃಷ್ಣ ಅವರೇ ಚಿತ್ರವನ್ನು ನಿರ್ದೇಶಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ