Webdunia - Bharat's app for daily news and videos

Install App

Trisha: ಒಂದು ರಾತ್ರಿಗೆ 25 ಲಕ್ಷ ಕೊಟ್ಟಿದ್ದೆವು ಎಂದಿದ್ದ ಎವಿ ರಾಜು ವಿರುದ್ಧ ನಟಿ ತ್ರಿಶಾ ನೋಟಿಸ್

Krishnaveni K
ಶುಕ್ರವಾರ, 23 ಫೆಬ್ರವರಿ 2024 (09:23 IST)
Photo Courtesy: Twitter
ಚೆನ್ನೈ: ಒಂದು ರಾತ್ರಿಗೆ 25 ಲಕ್ಷ ಕೊಟ್ಟು ಕರೆಯಿಸಿಕೊಂಡಿದ್ದೆವು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಡಿಎಂಕೆ ಉಚ್ಛಾಟಿತ ನಾಯಕ ಎ.ವಿ. ರಾಜು ವಿರುದ್ಧ ನಟಿ ತ್ರಿಶಾ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ಎ.ವಿ. ರಾಜು ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಬಾಯಿಗೆ ಬಂದಂತೆ ಅಸಂಬದ್ಧ ಮಾತನಾಡಿದ ರಾಜಕಾರಣಿ ವಿರುದ್ಧ ನಟಿ ತ್ರಿಶಾ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಅವರಿಗೆ ಲೀಗಲ್ ನೋಟಿಸ್ ನೀಡಲಾಗಿದ್ದು ಅದನ್ನು ಬಹಿರಂಗವಾಗಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈಗಾಗಲೇ ಎ.ವಿ. ರಾಜು ನೀಡಿದ ಹೇಳಿಕೆಗಳನ್ನು ಮಾಧ‍್ಯಮಗಳು, ಸೋಷಿಯಲ್ ಮೀಡಿಯಾಗಳಿಂದ ಅಳಿಸಿ ಹಾಕಬೇಕು ಮತ್ತು ತ್ರಿಶಾಗೆ ಬಹಿರಂಗವಾಗಿ ಬೇಷರತ್ ಕ್ಷಮೆ ಯಾಚಿಸಬೇಕು. ಇಲ್ಲದೇ ಹೋದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸವುದಾಗಿ ನೋಟಿಸ್ ನಲ್ಲಿ ಹೇಳಲಾಗಿದೆ. ನೋಟಿಸ್ ಸ್ವೀಕರಿಸಿದ 24 ಗಂಟೆಗಳಲ್ಲಿ ಕ್ಷಮೆ ಯಾಚಿಸಬೇಕು ಎಂದು ನೋಟಿಸ್ ನಲ್ಲಿ ಹೇಳಲಾಗಿದೆ.

ಆದರೆ ಇದಕ್ಕೂ ಮೊದಲೇ ಎ.ವಿ. ರಾಜು ಕ್ಷಮೆ ಯಾಚಿಸಿದ್ದಾರೆ. ತಮ್ಮ ಹೇಳಿಕೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೇ ಪ್ರತಿಕ್ರಿಯಿಸಿದ್ದ ಎ.ವಿ. ರಾಜು ನಾನು ಯಾರ ಹೆಸರನ್ನೂ ಹೇಳಿರಲಿಲ್ಲ. ಹಾಗಿದ್ದರೂ ತ್ರಿಶಾ ಅವರ ಕ್ಷಮೆ ಯಾಚಿಸುವುದಾಗಿ ಹೇಳಿದ್ದಾರೆ.  ಇದಕ್ಕೆ ಮೊದಲು ನಟ ಮನ್ಸೂರ್ ಅಲಿ ಖಾನ್ ಕೂಡಾ ತ್ರಿಶಾ ಬಗ್ಗೆ ಮಾನಹಾನಿಕಾರಕ ಹೇಳಿಕೆ ನೀಡಿದ್ದರು. ಬಳಿಕ ತ್ರಿಶಾ ವಿರುದ್ಧವೇ ಕೋರ್ಟ್ ಗೆ ಹೋಗಿ ಛೀಮಾರಿ ಹಾಕಿಸಿಕೊಂಡಿದ್ದರು. ಇದೀಗ ರಾಜಕಾರಣಿ ಎ.ವಿ. ರಾಜು ಸರದಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments