Select Your Language

Notifications

webdunia
webdunia
webdunia
webdunia

ನಟ ದರ್ಶನ್‌ಗೆ ಮತ್ತೆ ಸಂಕಷ್ಟ: ಜಾಮೀನು ರದ್ದು ಕೋರಿ ಸುಪ್ರೀಂಗೆ ಮೇಲ್ಮನವಿಗೆ ನಿರ್ಧಾರ

Actor Darshan

Sampriya

ಬೆಂಗಳೂರು , ಶುಕ್ರವಾರ, 15 ನವೆಂಬರ್ 2024 (14:05 IST)
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಸಮ್ಮತಿ ನೀಡಿದೆ.

ಗೃಹ ಇಲಾಖೆ ಅನುಮತಿ ನೀಡಿರುವ ವಿಚಾರವನ್ನು ನಗರದ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಖಚಿತ ಪಡಿಸಿದರು. ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಸಲಾಗುವುದು. ಸಿದ್ಧತೆ ನಡೆದಿದೆ ಎಂದು ಅವರು ಹೇಳಿದರು.

ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದರು.‌ ಆಗ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಚಿಕಿತ್ಸೆಗೆ ಜಾಮೀನು ನೀಡುವಂತೆ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.

ಅರ್ಜಿ ಪುರಸ್ಕರಿಸಿದ್ದ ಹೈಕೋರ್ಟ್‌ ಷರತ್ತುಬದ್ಧವಾಗಿ ಆರು ವಾರಗಳ ಜಾಮೀನು‌ ಮಂಜೂರು ಮಾಡಿತ್ತು. ‌ಅದಾದ ಮೇಲೆ ದರ್ಶನ್ ಅವರು ಜೈಲಿನಿಂದ ಬಿಡುಗಡೆ ಆಗಿದ್ದರು. ಸದ್ಯ ಬಿಜಿಎಸ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಪ್ರಕರಣದ ತನಿಖಾಧಿಕಾರಿಗಳು ಜಾಮೀನು ರದ್ದತಿಗೆ ಸುಪ್ರೀಂ‌ನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡುವಂತೆ ಗೃಹ ಇಲಾಖೆಗೆ ಮನವಿ ಸಲ್ಲಿಸಿದ್ದರು. ಗೃಹ ಇಲಾಖೆ ಇದೀಗ ಸಮ್ಮತಿ ನೀಡಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಭೈರತಿ ರಣಗಲ್ ರಿಲೀಸ್: ಅಭಿಮಾನಿಗಳೊಂದಿಗೆ ಟಪ್ಪಾಂಗುಚ್ಚಿ ಡ್ಯಾನ್ಸ್ ಮಾಡಿದ ಡಾಲಿ ಧನಂಜಯ ವಿಡಿಯೋ