ಬೆಂಗಳೂರು: ಯು ಟರ್ನ್ ಎನ್ನುವ ಕನ್ನಡ ಸಿನಿಮಾ ಸಾಕಷ್ಟು ಸದ್ದು ಮಾಡಿದೆ. ಅದೀಗ ಗೋವಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲೂ ಪ್ರದರ್ಶನವಾಗಿದೆ. ಈ ಚಿತ್ರಕ್ಕೆ ಮೂಲ ಪ್ರೇರಣೆ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಎಂದು ಅದರ ನಿರ್ದೇಶಕ ಪವನ್ ಕುಮಾರ್ ಹೇಳಿಕೊಂಡಿದ್ದಾರೆ.
ಗೋವಾ ಚಲನಚಿತ್ರೋತ್ಸವದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಚಿತ್ರಕ್ಕೆ ಮೂಲ ಪ್ರೇರಣೆ ಬೆಂಗಳೂರಿನಲ್ಲಿ ಜನರು ದಿನ ನಿತ್ಯ ಅನುಭವಿಸುತ್ತಿರುವ ಟ್ರಾಫಿಕ್ ಕಿರಿ ಕಿರಿ ಮತ್ತು ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳಾಗಿವೆ ಎಂದು ಅವರು ಹೇಳಿದ್ದಾರೆ.
ಯು ಟರ್ನ್ ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವಾಗಿದ್ದು, ಈಗಾಗಲೇ ಯಶಸ್ವಿ ಪ್ರದರ್ಶನ ಕಂಡಿದೆ. ಅಲ್ಲದೆ ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಚೊಚ್ಚಲ ಪ್ರದರ್ಶನ ಕಂಡ ಚಿತ್ರವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ