ಬಿಗ್‌ಬಾಸ್‌ನಿಂದ ಬಂದ್ಮೇಲೆ ಹೊಸ ಅಧ್ಯಾಯ ಶುರು ಮಾಡಿದ ಉಗ್ರಂ ಮಂಜು

Sampriya
ಭಾನುವಾರ, 9 ನವೆಂಬರ್ 2025 (17:12 IST)
Photo Credit X
ಬೆಂಗಳೂರು: ಬಿಗ್‌ಬಾಸ್‌ ಸೀಸನ್ 11ರ ಸ್ಪರ್ಧಿ, ನಟ ಉಗ್ರಂ ಮಂಜು ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದೀಗ ನಟ ಗುಟ್ಟಾಗಿ, ತಮ್ಮ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 

 ಉಗ್ರಂ ಮಂಜು ಅವರು ಸಂಧ್ಯಾ ಅವರನ್ನು ವಿವಾಹವಾಗಲಿದ್ದು, ಇಬ್ಬರ ನಿಶ್ಚಿತಾರ್ಥ ಕಾರ್ಯಕ್ರಮ ಆತ್ಮೀಯರು, ಸ್ನೇಹಿತರ ಸಮ್ಮುಖದಲ್ಲಿ ನೆರವೇರಿದೆ. ಪರಸ್ಪರ ಉಂಗುರ ಬದಲಾಯಿಸಿಕೊಳ್ಳುತ್ತಿರುವ ಚಿತ್ರಗಳನ್ನು ಉಗ್ರಂ ಮಂಜು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಬದುಕಿನ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಬರೆದುಕೊಂಡಿದ್ದಾರೆ.

ಹೊಸ ಜೋಡಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬಿಗ್‌ಬಾಸ್ ಮನೆಯಲ್ಲಿರುವಾಗಲೂ ಮಂಜು ಅವರ ಪೋಷಕರು ಮದುವೆಯಾಗಬೇಕೆಂಬ ಬೇಡಿಕೆಯನ್ನು ವ್ಯಕ್ತಪಡಿಸಿದ್ದರು. ಆದರೆ ಮಂಜು ನೋಡುವಾ ಎಂದು ನಿರಾಸಕ್ತಿಯನ್ನು ತೋರಿದ್ದರು. 

ಇನ್ನೂ ಬಿಗ್‌ಬಾಸ್‌ನಿಂದ ಹೊರಬಂದ್ಮೇಲೆ ಬದಲಾದ ಉಗ್ರಂ ಮಂಜು ಇದೀಗ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡು, ದಾಂಪತ್ಯ ಜೀವನಕ್ಕೆ ಸಜ್ಜಾಗಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಧರ್ಮೇಂದ್ರ ನಿಧನದ ಸುದ್ದಿ ಸುಳ್ಳು: ಕುಟುಂಬದಿಂದಲೇ ಬಂತು ಸ್ಪಷ್ಟನೆ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

ಸಿಸಿಬಿ ವಿಚಾರಣೆಗೆ ಬಗ್ಗಲ್ಲ, ಏನೇ ಆದ್ರೂ ದರ್ಶನ್ ಜೊತೆಗೇ ನಿಲ್ಲುತ್ತೇನೆ ಎಂದ ಧನ್ವೀರ್

ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ತಮಿಳು ನಟ ಅಭಿನಯ್ ಕಿಂಗರ್ ಇನ್ನಿಲ್ಲ

ಮುಂದಿನ ಸುದ್ದಿ
Show comments