Publish Date: Mon, 10 Aug 2026 (18:37 IST)
Updated Date: Mon, 10 Aug 2026 (18:39 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗೆಳತಿ ಪವಿತ್ರಾಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಪ್ರಕರಣದ 14ನೇ ಆರೋಪಿ(ಎ-14) ಪ್ರದೋಷ್ ನ್ನನ್ನು 'ಮಾಫಿ ಸಾಕ್ಷಿ'ಯಾಗಿ ಪರಿಗಣಿಸಲು ನ್ಯಾಯಾಲಯ ಸೋಮವಾರ ಒಪ್ಪಿಗೆ ಸೂಚಿಸುವ ಮೂಲಕ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.
ಈ ಮೂಲಕ ನಟ ದರ್ಶನ್ ಅವರ ವಿರುದ್ಧ ಸ್ನೇಹಿತರೇ ಸಾಕ್ಷ್ಯ ಹೇಳಲು ನಿರ್ಧರಿಸಿದ್ದು, ಪ್ರಕರಣ ಯಾರೂ ನಿರೀಕ್ಷಿಸಿರದ ರೀತಿಯಲ್ಲಿ ದೊಡ್ಡ ತಿರುವು ಪಡೆದುಕೊಂಡಿದೆ. ಹೀಗಾಗಿ ಜೈಲಿನಲ್ಲಿರುವ ನಟ ದರ್ಶನ್, ಹಾಗೂ ಪವಿತ್ರಾ ಗೌಡ ಅವರಿಗೆ ಭಾರೀ ಟೆನ್ಶನ್ ಶುರುವಾಗಿದೆ.
ಪ್ರದೋಷ್ ನ್ಯಾಯಾಲಯಕ್ಕೆ ಸಲ್ಲಿಸಿರುವ 11 ಪುಟಗಳ ಕ್ಷಮಾದಾನ ಅರ್ಜಿ(ಮಾಫಿ ಸಾಕ್ಷಿ)ಯಲ್ಲಿ ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ.
ಜಯನಗರದ ಮೈದಾನದಲ್ಲಿ ದರ್ಶನ್ ಪರಿಚಯವಾದ ದಿನದಿಂದ ಹಿಡಿದು ಜೈಲು ಪಾಲಾಗುವವರೆಗಿನ ಇಡೀ ಘಟನಾವಳಿಯನ್ನು ಎಳೆಎಳೆಯಾಗಿ ಸಿಸಿಎಚ್-59 ನ್ಯಾಯಾಧೀಶರ ಮುಂದೆ ಪ್ರದೋಷ್ ವಿವರಿಸಿದ್ದಾರೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರದೋಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು 59ನೇ ಸಿಸಿಹೆಚ್ ನ್ಯಾಯಾಲಯ ಸಮ್ಮತಿ ನೀಡಿದೆ.
ಈ ಹಿಂದೆ ಪ್ರದೋಷ್ ಮಾಫಿ ಸಾಕ್ಷಿಯಾಗಲು ಪ್ರಾಸಿಕ್ಯೂಷನ್ ಒಪ್ಪಿಗೆ ನೀಡಿತ್ತು.
ಆದರೆ ದರ್ಶನ್ ಪರ ವಕೀಲರು ಇದನ್ನು ವಿರೋಧಿಸಿದ್ದರು. ಇದೀಗ ನ್ಯಾಯಾಲಯವೇ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಪುರಸ್ಕರಿಸಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ