ನಟ ವಿಜಯ್ ಸೇತುಪತಿ ಮಗಳಿಗೆ ಅತ್ಯಾಚಾರದ ಬೆದರಿಕೆ; ವ್ಯಕ್ತಿಯ ವಿರುದ್ಧ ದೂರು ದಾಖಲು

Webdunia
ಗುರುವಾರ, 22 ಅಕ್ಟೋಬರ್ 2020 (07:58 IST)
ಚೆನ್ನೈ : ಶ್ರೀಲಂಕಾದ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರ ಜೀವನಚರಿತ್ರೆಯಲ್ಲಿ ನಟಿಸಿದ್ದಕ್ಕಾಗಿ ನಟ ವಿಜಯ್ ಸೇತುಪತಿ ಅವರ ಮಗಳಿಗೆ ಸತತವಾಗಿ ಅತ್ಯಾಚಾರ ಬೆದರಿಕೆ ಹಾಕಿದ್ದಕ್ಕಾಗಿ ಚೆನ್ನೈ ಸೈಬರ್ ಅಪರಾಧ ವಿಭಾಗ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿದೆ.

ಆರೋಪಿಯನ್ನು  ರಿತಿಕ್ ರಾಜ್ಎಂದು ಗುರುತಿಸಲಾಗಿದೆ. ನಟ ವಿಜಯ್ ಸೇತುಪತಿ ಅವರು ನಟಿಸಿದ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರ ಜೀವನಚರಿತ್ರೆ ಆಧಾರಿತ 800 ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆದಾಗಿನಿಂದ ನಟನ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿತ್ತು. ಈ ಹಿನ್ನಲೆಯಲ್ಲಿ ರಿತಿಕ್ ರಾಜ್ ಎಂಬಾತ ನಟ ವಿಜಯ್ ಸೇತುಪತಿಗೆ ಈ ಚಿತ್ರದಿಂದ ಹಿಂದೆಸರಿಯದಿದ್ದರೆ ಮಗಳ ಮೇಲೆ ಅತ್ಯಾಚಾರ ಎಸಗುವುದಾಗಿ ಬೆದರಿಕೆ ಹಾಕಿದ್ದಾನೆ.

ಈತನ ವಿರುದ್ಧ ಕ್ರಮ ಜರುಗಿಸುವಂತೆ ಅನೇಕ ಕಾರ್ಯಕರ್ತರು, ಸಂಘ ಸಂಸ್ಥೆಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಸೈಬರ್ ಕ್ರೈಂ ವಿಭಾಗ ದೂರು ದಾಖಲಿಸಿಕೊಂಡು ಆರೋಪಿ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments