ಬೆಂಗಳೂರು : ಸೂಪರ್ ಸ್ಟಾರ್ ರಜನೀಕಾಂತ್ ಅವರ ದರ್ಬಾರ್ ಚಿತ್ರ ಬಿಡುಗಡೆಗೆ ಸಂಕಷ್ಟ ಎದುರಾಗಿದ್ದು, ಇದೀಗ ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.
ಇಂದು ದೇಶದಾದ್ಯಂತ ಏಕಕಾಲದಲ್ಲಿ ರಜನೀಕಾಂತ್ ಅವರ ಬಹುನಿರೀಕ್ಷಿತ ದರ್ಬಾರ್ ಚಿತ್ರ ತೆರೆ ಕಾಣುತ್ತಿದ್ದು, ಕನ್ನಡ, ತಮಿಳು, ತೆಲುಗು ಸೇರಿದಂತೆ ಒಟ್ಟು 5 ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗುತ್ತದೆ. ಕರ್ನಾಟಕದ ಹಲವು ಚಿತ್ರಮಂದಿರಗಳಲ್ಲಿ ಈ ಚಿತ್ರ ಕನ್ನಡ, ತಮಿಳು, ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಿದ್ದರೆ. ನರ್ತಕಿ ಚಿತ್ರಮಂದಿರದಲ್ಲಿ ತಮಿಳು, ತೆಲುಗು ಭಾಷೆಯಲ್ಲಿ ಮಾತ್ರ ಬಿಡುಗಡೆ ಮಾಡಲಾಗಿದೆ.
ಈ ಹಿನ್ನಲೆಯಲ್ಲಿ ಇದೀಗ ಪ್ರತಿಭಟನಾಕಾರರು ನರ್ತಕಿ ಥಿಯೇಟರ್ ಮುಂದೆ ಬಂದು ಚಿತ್ರ ಪ್ರದರ್ಶನ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ದರ್ಬಾರ್ ಸಿನಿಮಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದಕಾರಣ ಪ್ರತಿಭಟನಾಕಾರರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.