Publish Date: Tue, 17 Nov 2020 (09:23 IST)
Updated Date: Tue, 17 Nov 2020 (09:25 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.
ಆರ್ ಚಂದ್ರು ನಿರ್ದೇಶನದ ಕಬ್ಜ ಸಿನಿಮಾ ಎಂಟು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಪೂರೈಸಿರುವ ಚಿತ್ರ ತಂಡ ಈಗ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲು ನಿರ್ಧರಿಸಿದೆ. 80 ರ ದಶಕದ ಅಂಡರ್ ವರ್ಲ್ಡ್ ಕತೆಯನ್ನೊಳಗೊಂಡ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆಯಿದೆ.