ಮತ್ತೆ ರಿಲೀಸ್ ಆದ್ರೂ ರಿಯಲ್ ಸ್ಟಾರ್ ಉಪೇಂದ್ರ ಎ ಸಿನಿಮಾಗೆ ಭರ್ಜರಿ ಬೇಡಿಕೆ

Krishnaveni K
ಶುಕ್ರವಾರ, 17 ಮೇ 2024 (11:13 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾಗಳೆಂದರೆ ಹಾಗೆ. ಎವರ್ ಗ್ರೀನ್ ಆಗಿರುತ್ತದೆ. ಜನ ಈಗಲೂ ಅವರ ಸಿನಿಮಾಗಳನ್ನು ಹುಚ್ಚೆದ್ದು ನೋಡುತ್ತಾರೆ. ಅಂತಹದ್ದರಲ್ಲಿ ಈಗ ಸೂಪರ್ ಹಿಟ್ ಎ ಸಿನಿಮಾ ರಿ ರಿಲೀಸ್ ಆಗಿದೆ.

ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಸೂಪರ್ ಹಿಟ್ ಸಿನಿಮಾಗಳಲ್ಲಿ ಎ ಸಿನಿಮಾ ಮೊದಲ ಪಂಕ್ತಿಯಲ್ಲಿ ಬರುತ್ತದೆ. ಈ ಸಿನಿಮಾ ಈಗ ರಿ ರಿಲೀಸ್ ಆಗಿದೆ. ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ಸ್ಟಾರ್ ನಟರ ಸಿನಿಮಾಗಳು ಬಿಡುಗಡೆಯಾಗದೇ ಚಿತ್ರಮಂದಿರ ಭಣಗುಡುತ್ತಿದೆ.

ಹೀಗಾಗಿ ಥಿಯೇಟರ್ ಮಾಲಿಕರು ಹಳೇ ಸಿನಿಮಾಗಳನ್ನು ರಿ ರಿಲೀಸ್ ಮಾಡುತ್ತಿದ್ದಾರೆ. ಕಳೆದ ವಾರ ಪುನೀತ್ ರಾಜ್ ಕುಮಾರ್ ಅವರ ಪವರ್ ಸಿನಿಮಾ ಥಿಯೇಟರ್ ನಲ್ಲಿ ರಿ ರಿಲೀಸ್ ಆಗಿತ್ತು. ಇದಾದ ಬಳಿಕ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಕೃಷ್ಣ ನೀ ಬೇಗನೆ ಬಾರೋ ಸಿನಿಮಾ ರಿಲೀಸ್ ಆಗಿತ್ತು. ಇದೀಗ ಉಪೇಂದ್ರ ಅವರ ಎ ಸಿನಿಮಾ ರಿಲೀಸ್ ಆಗಿದೆ.

ಬೆಂಗಳೂರಿನ ಪ್ರಸನ್ನ ಥಿಯೇಟರ್ ನಲ್ಲಿ ಸಿನಿಮಾ ರಿ ರಿಲೀಸ್ ಆಗಿದೆ. ಹಳೆಯ ಸಿನಿಮಾವಾದರೂ ಮಳೆಯ ನಡುವೆಯೂ ಈ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಂಡಿರುವುದು ವಿಶೇಷ. ಉಪ್ಪಿ ಎಂಟ್ರಿಗೆ ಜನ ಶಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ. ಇಂದು ಬೆಳಿಗ್ಗೆ 7 ಗಂಟೆಗೆ ಶೋ ಆಯೋಜನೆಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments