Select Your Language

Notifications

webdunia
webdunia
webdunia
webdunia

ಪವನ್‌ ಕಲ್ಯಾಣ್‌ ಗೆಲುವಿಗೆ ಹೋಲಿಸಿದ ಪೋಸ್ಟ್‌ಗೆ ಅಸಮಾಧಾನ ಹೊರಹಾಕಿದ ಉಪೇಂದ್ರ

Pawan Kalyan

sampriya

ಬೆಂಗಳೂರು , ಗುರುವಾರ, 6 ಜೂನ್ 2024 (20:13 IST)
Photo By X
ಬೆಂಗಳೂರು: ‘ಪವನ್ ಕಲ್ಯಾಣ್‌ ಅವರನ್ನು ಗೆಲ್ಲಿಸಲು ತೆಲುಗಿನ ಜನ 14 ವರ್ಷ ತೆಗೆದುಕೊಂಡರು, ಉಪೇಂದ್ರ ಅವರನ್ನು ಗೆಲ್ಲಿಸಲು ಕನ್ನಡಿಗರು ಎಷ್ಟು ವರ್ಷ ತೆಗೆದುಕೊಳ್ಳುತ್ತಾರೋ’ ಎಂಬ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್‌ ಅನ್ನು ಹಂಚಿಕೊಂಡು ನಟ ಉಪೇಂದ್ರ ಅವರು ಅಸಮಾಧಾನ ಹೊರಹಾಕಿದ್ದಾರೆ.

ಈ ಪೋಸ್ಟ್‌ ಅನ್ನು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಅವರು, ‘ನನ್ನ ಸೋಲು–ಗೆಲುವಿನ ಬಗ್ಗೆ ತುಂಬಾ ಚಿಂತೆ ಮಾಡುತ್ತಿದೀರಾ?. ಎಂತಹ ನಿಸ್ವಾರ್ಥ, ತ್ಯಾಗ ಮನೋಭಾವ ನಿಮ್ಮದು. ನಿಮ್ಮೆಲ್ಲರ ಪಾದಕ್ಕೆ ಅಡ್ಡಬೀಳುವೆ’ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

ವಾಹ್ ಮೈ ಡಿಯರ್ ಪ್ರಜಾಪ್ರಭುಗಳೇ ವಾಹ್…
ಉಪೇಂದ್ರ ಸೋಲು ಗೆಲವು ಬಗ್ಗೆ ತುಂಬಾ ಚಿಂತೆ ಮಾಡ್ತಿದೀರ !
ಎಂತಾ ನಿಸ್ವಾರ್ಥ ! ಎಂತಾ ತ್ಯಾಗ ಮನೋಭಾವ ! ನಿಮ್ಮೆಲ್ಲರ ಪಾದಕ್ಕೆ ಅಡ್ ಬಿದ್ದೆ ????????????
ಡೋಂಟ್ ವರೀ… ನಾನ್ ಗೆಲ್ಬೇಕು ಅಂತ ಅನ್ನಿಸಿದಾಗ ಯಾವುದಾದರೂ ರಾಜಕೀಯ ಪಕ್ಷ ಸೇರಿ ನೀವ್ ಹೇಳ್ದಾಗೆಲ್ಲಾ ಮಾಡ್ತೀನಿ ????????
ಗೆದ್ದೇ ಗೆಲ್ತೀನಿ ????
ನೀವ್ ಗೆಲ್ಲೋದ್ ಯಾವಾಗ ಅಂತ ನೀವ್ ಯೋಚನೆ ಮಾಡ್ರಪ್ಪೋ ????
ನೆಕ್ಸ್ಟ್ ಎಲೆಕ್ಷನ್ ನಲ್ಲಿ ನನಗ್ ಕೆಲ್ಸಾ ಕೊಡ್ತೀರ ಅಂದ್ರೆ ನಿಲ್ತೀನಿ ಆಗ್ಲೂ ನೀವ್ ಎಮೋಸನಲ್ ಪ್ರಚಾರ ಮಾಡ್ರೀ ….. ಸಭೆ ಸಮಾರಂಬ ಎಲ್ಲಾ ಮಾಡ್ರೀ ….
ಕಷ್ಟ ಪಡ್ರೀ …..
ಆಮೇಲ್ ಐದು ವರ್ಸ ನೀವೇನ್ ಬೇಕಾದ್ರೂ ಮಾಡ್ಕಳಿ ನಾವ್ ಕೇಳಕ್ ಬರಲ್ಲ ಅಂದ್ರೆ…… ಉಸ್.. ಏನ್ ಬರೀಬೇಕೋ ಗೊತ್ತಾಗ್ತಿಲಿರಪ್ಪೋ ????
ಈ ದಡ್ ನನ್ ಮಗಂಗೇ ಯಾವೋನಾದ್ರ ಇನ್ ಮೇಲೆ ಬುದ್ದಿವಂತಾ ಅಂದ್ರೇ ಅಷ್ಟೇ… ಸೆಂದಾಗಿರಕ್ಕಿಲ್ಲಾ ಎಂದು ಮಾರ್ಮಿಕವಾಗಿ ಬರೆದುಕೊಂಡಿದ್ದಾರೆ.

ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಜನಸೇನಾ ಪಕ್ಷದ ಅಧ್ಯಕ್ಷ, ನಟ ಪವನ್ ಕಲ್ಯಾಣ್‌ ಅವರ ಭರ್ಜರಿ ಜಯ ಗಳಿಸಿದರು. ಈ ಗೆಲುವಿನ ಬೆನ್ನಲ್ಲೇ ನಟ ಉಪೇಂದ್ರ ಅವರ ಪ್ರಜಾಕೀಯ ಪಕ್ಷವನ್ನು ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷಕ್ಕೆ ಹೋಲಿಸಿ ಅನೇಕ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡುತ್ತಿದ್ದಾರೆ. ಈ ಮೂಲಕ ಉಪೇಂದ್ರ ಅವರು ಪ್ರಜಾಕೀಯ ಪಕ್ಷದ ಬಗ್ಗೆ ಆಸಕ್ತಿ ತೋರಿಸುತಿಲ್ಲ ಎಂದು ಹೇಳಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಣ್ಣ ಚಿರಂಜೀವಿ ಕಾಲಿಗೆ ಅಡ್ಡಬಿದ್ದು ಆಶೀರ್ವಾದ ಪಡೆದ ಪವನ್‌ ಕಲ್ಯಾಣ್‌