Select Your Language

Notifications

webdunia
webdunia
webdunia
webdunia

ಟಾಲಿವುಡ್‌ ಸ್ಟಾರ್‌ ಅಲ್ಲು ಅರ್ಜುನ್‌ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಭೇಟಿಯಾದ ಉಪೇಂದ್ರ

Tollywood Star Allu Arjun

Sampriya

ಹೈದರಾಬಾದ್ , ಶನಿವಾರ, 14 ಡಿಸೆಂಬರ್ 2024 (15:30 IST)
Photo Courtesy X
ಹೈದರಾಬಾದ್: ನಿನ್ನೆ ಜೈಲು ಸೇರಿದ್ದ ಟಾಲಿವುಡ್‌ ಸ್ಟಾರ್‌ ಅಲ್ಲು ಅರ್ಜುನ್‌ ಬಿಡುಗಡೆಯಾಗಿದ್ದಾರೆ. ಅದರ ಬೆನ್ನಲ್ಲೇ ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ಚಿತ್ರ ನಿರ್ಮಾಪಕ ಲಹರಿ ವೇಲು ಅವರು ಅಲ್ಲು ಅವರನ್ನು ಭೇಟಿಯಾಗಿದ್ದಾರೆ.

ಪುಷ್ಪ 2 ಚಿತ್ರ ಪ್ರದರ್ಶನ ವೇಳೆ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಶುಕ್ರವಾರ ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್‌ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಹೊರಬಂದ ಅಲ್ಲು ಅರ್ಜುನ್‌ ನೇರವಾಗಿ ಮನೆಗೆ ಬಂದಿದ್ದರು. ಮನೆಗೆ ಹಲವು ನಟರು, ನಿರ್ಮಾಪಕರು ಭೇಟಿ ನೀಡಿದ್ದರು. ಇದೇ ಸಂದರ್ಭದಲ್ಲಿ ಉಪೇಂದ್ರ ಹಾಗೂ ಲಹರಿ ವೇಲು ಅವರೂ ಭೇಟಿಯಾಗಿದ್ದಾರೆ. ಯುಐ ಸಿನಿಮಾ ಪ್ರಚಾರದ ಭಾಗವಾಗಿ ಅವರು ಅಲ್ಲು ಅರ್ಜುನ್‌ ಅವರನ್ನು ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲು ಅರ್ಜುನ್‌ ಮತ್ತು ಉಪೇಂದ್ರ ಅವರು ಸನ್‌ ಆಫ್‌ ಸತ್ಯಮೂರ್ತಿ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದರು.

ಈಚೆಗೆ ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪ 2: ದಿ ರೂಲ್‌ ಸಿನಿಮಾದ ಪ್ರೀಮಿಯರ್‌ ಪ್ರದರ್ಶನ ನಡೆಯುತ್ತಿದ್ದಾಗ ಉಂಟಾದ ನೂಕುನುಗ್ಗಲು ಮತ್ತು ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣದಲ್ಲಿ ಅಲ್ಲು ಅರ್ಜುನ್‌ ಅವರನ್ನು ಬಂಧಿಸಲಾಗಿತ್ತು.

ಅಲ್ಲು ಅರ್ಜುನ್‌ ಅವರು ಆ ಸಂದರ್ಭದಲ್ಲಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಜೊತೆಗೂಡಿ ಸಿನಿಮಾ ವೀಕ್ಷಿಸಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಲು ಸಾವಿರಾರು ಜನರು ನುಗ್ಗಿ ಬಂದ ಕಾರಣ ಕಾಲ್ತುಳಿತ ಉಂಟಾಗಿತ್ತು.

ಅಲ್ಲು ಅರ್ಜುನ್‌ ಮತ್ತು ಅವರ ಭದ್ರತಾ ಸಿಬ್ಬಂದಿ ಮೇಲೆ ಪ್ರಕರಣ ದಾಖಲಾಗಿತ್ತು. ಸಾರ್ವಜನಿಕ ಸುರಕ್ಷತೆ ಕಾಯ್ದುಕೊಳ್ಳುವಲ್ಲಿ ವೈಫಲ್ಯ ಮತ್ತು ನಿರ್ಲಕ್ಷ್ಯ ತೋರಲಾಗಿದೆ ಎಂದು ಆರೋಪಿಸಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ನಟ ದರ್ಶನ್ ಜಾಮೀನಿಗೆ ಕಂಟಕ ತರುತ್ತಾರಾ ಪೊಲೀಸರು: ರೇಣುಕಾಸ್ವಾಮಿ ತಂದೆಯ ಆಗ್ರಹವೇನು