ಇದೇ ತಿಂಗಳ 20ರಂದು ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ ಯುಐ ಸಿನಿಮಾ ವಿವಿಧ ಭಾಷೆಗಳಲ್ಲಿ ತೆರೆಕಾಣಲು ಸಜ್ಜಾಗಿ ನಿಂತಿದೆ. ಈ ಹಿನ್ನೆಲೆ ಉಪೇಂದ್ರ ಅವರು ತಮ್ಮ ಸಿನಿಮಾ ತಂಡದೊಂದಿಗೆ ರಾಜ್ಯದಲ್ಲಿರುವ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿರುವ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ ಪೂಜೆ ಸಲ್ಲಿಸಿ, ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಉಪೇಂದ್ರ ಆಂಡ್ ಟೀಮ್ ಕೊರಗಜ್ಜ ದೈವದ ದರ್ಶನ ಪಡೆದಿದ್ದಾರೆ.
ಉಪೇಂದ್ರ ಜೊತೆ ನಿರ್ಮಾಪಕ ಕೆ.ಪಿ ಶ್ರೀಕಾಂತ್, ಲಹರಿ ವೇಲು ಹಾಗೂ ನವೀನ್ ಮನೋಹರನ್ ಕೂಡ ದೇವರ ದರ್ಶನ ಪಡೆದಿದ್ದಾರೆ. ದೇವಸ್ಥಾನದಲ್ಲಿ ಉಪೇಂದ್ರ ಜತೆ ಸೆಲ್ಫಿ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಅಂದಹಾಗೆ, ಎಐ ಯುಗದಲ್ಲಿ ಯುಐ ಮ್ಯಾಜಿಕ್, ಟ್ರೈಲರ್‌ನಲ್ಲಿ ಮಸ್ತ್ ಆಗಿ ಮೂಡಿ ಬಂದಿದೆ. ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ (ಟ್ರೈಲರ್) ಸವಾಲು ಹಾಕುವಂತಿದೆ.