ಯುಐ ರಿಲೀಸ್‌ಗೂ ಮುನ್ನಾ ಕಟೀಲು ದೇವಿಯ ಆಶೀರ್ವಾದ ಪಡೆದ ಉಪೇಂದ್ರ

Sampriya
ಮಂಗಳವಾರ, 3 ಡಿಸೆಂಬರ್ 2024 (16:17 IST)
Photo Courtesy X
ಇದೇ ತಿಂಗಳ 20ರಂದು ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ ಯುಐ ಸಿನಿಮಾ ವಿವಿಧ ಭಾಷೆಗಳಲ್ಲಿ ತೆರೆಕಾಣಲು ಸಜ್ಜಾಗಿ ನಿಂತಿದೆ. ಈ ಹಿನ್ನೆಲೆ ಉಪೇಂದ್ರ ಅವರು ತಮ್ಮ ಸಿನಿಮಾ ತಂಡದೊಂದಿಗೆ ರಾಜ್ಯದಲ್ಲಿರುವ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿರುವ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ ಪೂಜೆ ಸಲ್ಲಿಸಿ, ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಉಪೇಂದ್ರ ಆಂಡ್‌ ಟೀಮ್ ಕೊರಗಜ್ಜ ದೈವದ ದರ್ಶನ ಪಡೆದಿದ್ದಾರೆ.

ಉಪೇಂದ್ರ ಜೊತೆ ನಿರ್ಮಾಪಕ ಕೆ.ಪಿ ಶ್ರೀಕಾಂತ್, ಲಹರಿ ವೇಲು ಹಾಗೂ ನವೀನ್ ಮನೋಹರನ್ ಕೂಡ ದೇವರ ದರ್ಶನ ಪಡೆದಿದ್ದಾರೆ. ದೇವಸ್ಥಾನದಲ್ಲಿ ಉಪೇಂದ್ರ ಜತೆ ಸೆಲ್ಫಿ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ಅಂದಹಾಗೆ, ಎಐ ಯುಗದಲ್ಲಿ ಯುಐ ಮ್ಯಾಜಿಕ್, ಟ್ರೈಲರ್‌ನಲ್ಲಿ ಮಸ್ತ್ ಆಗಿ ಮೂಡಿ ಬಂದಿದೆ. ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ (ಟ್ರೈಲರ್) ಸವಾಲು ಹಾಕುವಂತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತಾಳ ಭಾಷೆ ಬಗ್ಗೆ ಮಾತನಾಡುವ ಯಾವ ಹಕ್ಕು ನಿಮಗಿಲ್ಲ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ದರ್ಶನ್ ಜೈಲಿನಲ್ಲಿ, ಬರ್ತಡೇ ದಿನ ವಿಜಯಲಕ್ಷ್ಮಿ ಏನ್‌ ಮಾಡಿದ್ರೂ ಗೊತ್ತಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಮುಂದಿನ ಸುದ್ದಿ
Show comments