ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಬಹಳ ದಿನಗಳ ನಂತರ ನಿರ್ದೇಶನಕ್ಕಿಳಿಯುತ್ತಿರುವ ಸಿನಿಮಾ ಯುಐ. ಈ ಸಿನಿಮಾದಲ್ಲಿ ಅವರೇ ನಾಯಕನಾಗಿ ನಟಿಸುತ್ತಿದ್ದಾರೆ.
ಈ ಸಿನಿಮಾದ ಚಿತ್ರೀಕರಣ ಇದೀಗ ಹೈದರಾಬಾದ್ ನ ರಾಮೋಜಿ ಫಿಲಂ ಸಿಟಿಯಲ್ಲಿ ಭರದಿಂದ ನಡೆಯುತ್ತಿದೆ ಎಂಬ ಮಾಹಿತಿ ಬಂದಿದೆ.
ಯುಐ ಎಂಬ ವಿಶಿಷ್ಟ ಟೈಟಲ್ ನ ಸಿನಿಮಾದ ಕತೆಯೇನು ಎಂಬ ಬಗ್ಗೆ ಉಪೇಂದ್ರ ಗುಟ್ಟುಬಿಟ್ಟುಕೊಟ್ಟಿಲ್ಲ. ಈ ಸಿನಿಮಾ ಇದೇ ವರ್ಷ ತೆರೆಗೆ ಬರುವ ಸಾಧ‍್ಯತೆಯಿದೆ. ಚಿತ್ರದಲ್ಲಿ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಟೀಸರ್ ಸದ್ಯದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ.