ಯುಐ ಸಿನಿಮಾದಲ್ಲಿ ಮತ್ತೊಂದು ಮಹತ್ವದ ಕೆಲಸ ಶುರು ಮಾಡಿಕೊಂಡ ಉಪೇಂದ್ರ

Krishnaveni K
ಸೋಮವಾರ, 12 ಫೆಬ್ರವರಿ 2024 (15:50 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿರುವ ಯುಐ ಸಿನಿಮಾ ಯಾವಾಗ ಬಿಡುಗಡೆಯಾಗುತ್ತದೋ ಎಂದು ಪ್ರೇಕ್ಷಕರು ಕಾದು ಕುಳಿತಿದ್ದಾರೆ.

ಕಾರಣ ರಿಯಲ್ ಸ್ಟಾರ್ ಉಪೇಂದ್ರರನ್ನು ನಟನಾಗಿ ಎಷ್ಟು ಮಂದಿ ಇಷ್ಟಪಡುತ್ತಾರೋ ಅದರ ಹತ್ತರಷ್ಟು ಜನ ಅವರನ್ನು ನಿರ್ದೇಶಕರಾಗಿ ಆರಾಧಿಸುತ್ತಾರೆ. ಹಲವು ವರ್ಷದ ನಂತರ ಉಪೇಂದ್ರ ನಿರ್ದೇಶಕನಾಗಿ ಕಮ್ ಬ್ಯಾಕ್ ಮಾಡುತ್ತಿರುವ ಸಿನಿಮಾ ಯುಐ. ಇದರಲ್ಲಿ ಅವರೇ ನಾಯಕರೂ ಆಗಿದ್ದು, ಟೀಸರ್ ನಿಂದಲೇ ಪ್ರೇಕ್ಷಕರ ತಲೆಗೆ ಹುಳ ಬಿಟ್ಟಿದ್ದಾರೆ. ವಿಚಿತ್ರ ಹಿನ್ನಲೆ, ಪೋಷಾಕಿನಲ್ಲಿ ಸಿನಿಮಾ ಕತೆ ಏನಿರಬಹುದು ಎಂದು ಜನ ತಲೆಕೆರೆದುಕೊಂಡು ಯೋಚಿಸುವ ಹಾಗೆ ಮಾಡಿದ್ದಾರೆ.

ಯುಐ ಡಬ್ಬಿಂಗ್ ಶುರು ಮಾಡಿದ ಉಪೇಂದ್ರ
ಉಪೇಂದ್ರ ಈಗ ಯುಐ ಸಿನಿಮಾದ ಡಬ್ಬಿಂಗ್ ಕೆಲಸ ಶುರು ಮಾಡಿದ್ದಾರೆ. ಇದನ್ನು ಸ್ವತಃ ನಿರ್ಮಾಪಕ ಕೆಪಿ ಶ್ರೀಕಾಂತ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಉಪೇಂದ್ರ ಡಬ್ಬಿಂಗ್ ಮಾಡುತ್ತಿರುವ ಫೋಟೋವನ್ನೂ ಹಂಚಿಕೊಂಡಿದ್ದಾರೆ. ಅಲ್ಲಿಗೆ ಚಿತ್ರ ಒಂದು ಹಂತಕ್ಕೆ ಬಂದು ನಿಂತಿದೆ ಎನ್ನುವುದು ಪಕ್ಕಾ ಆಯ್ತು.

ಕೆಲವು ದಿನಗಳ ಹಿಂದಷ್ಟೇ ಚಿತ್ರತಂಡ ಸದ್ಯದಲ್ಲೇ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು. ಅದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ. ಯುಐ ಸಿನಿಮಾಗೆ ಕಾಂತಾರ ಖ್ಯಾತಿಯ ಅಜನೀಶ್ ಬಿ ಲೋಕನಾಥ್ ಸಂಗೀತ ಸಂಯೋಜಿಸುತ್ತಿದ್ದಾರೆ. ಇದಕ್ಕೆ ಮೊದಲು ಚಿಕ್ಕ ತುಣುಕೊಂಡನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಅದು ಯೂ ಟ್ಯೂಬ್ ನಲ್ಲಿ ಭಾರೀ ಹಿಟ್ ಆಗಿತ್ತು. ಇದು ಮಾಮೂಲಿ ಉಪೇಂದ್ರ ಶೈಲಿಯ ಸಿನಿಮಾ ಎಂದು ಟೀಸರ್ ನೋಡಿದಾಗಲೇ ಅರ್ಥವಾಗುತ್ತದೆ. ಯುಐ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಉಪೇಂದ್ರ ಅಭಿಮಾನಿಗಳು ಸಿನಿಮಾ ನೋಡಲು ಕಾತುರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments