ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ UI ಸಿನಿಮಾ ಯಶಸ್ಸು ಬೆನ್ನಲ್ಲೇ ಉಪೇಂದ್ರ ಟೆಂಪಲ್ ರನ್ ಮಾಡುತ್ತಿದ್ದಾರೆ. ಸಿನಿಮಾ ತೆರೆಗ ಮುನ್ನಾ ಉಪೇಂದ್ರ ಅವರು ರಾಜ್ಯದ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿದ್ದರು.
ಇದೀಗ ಸಿನಿಮಾ ಎಲ್ಲೆಡೆ ಉತ್ತಮ ಪ್ರಶಂಸೆಯೊಂದಿಗೆ ರಾಜ್ಯ ಸೇರಿದಂತೆ ದೇಶದೆಲ್ಲಡೆ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಇದೀಗ ಉಪೇಂದ್ರ ಸಿನಿಮಾ ಸಕ್ಸಸ್ ಬೆನ್ನಲ್ಲೇ ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಉಡುಪಿ ಜಿಲ್ಲೆಯ ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನಕ್ಕೆ UI ಟೀಮ್ ಭೇಟಿ ಕೊಟ್ಟಿದೆ. ಉಪೇಂದ್ರ, ಲಹರಿ ವೇಲು ಸೇರಿದಂತೆ ಅನೇಕರು ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಬಳಿಕ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌ಗೆ ಫೋಟೋಗೆ ನಟ ಪೋಸ್ ನೀಡಿದ್ದಾರೆ.
ಇನ್ನೂ 'ಯುಐ' ಸಿನಿಮಾ ಡಿ.20ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗಿತ್ತು. ಉಪೇಂದ್ರಗೆ ನಾಯಕಿಯಾಗಿ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ರಿಯಲ್ ಸ್ಟಾರ್ ನಟನೆ ಮತ್ತು ನಿರ್ದೇಶನಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.