Select Your Language

Notifications

webdunia
webdunia
webdunia
webdunia

ಉಪೇಂದ್ರ ನಿಮ್ಮ ಅಸಂಬದ್ಧ ಕಲ್ಪನೆ ಭ್ರಮೆ ಅಷ್ಟೇ: ಉಪ್ಪಿ ಬಗ್ಗೆ ಚೇತನ್‌ ವ್ಯಂಗ್ಯ

Chetan Ahimsa

sampriya

ಬೆಂಗಳೂರು , ಶುಕ್ರವಾರ, 7 ಜೂನ್ 2024 (16:19 IST)
Photo By X
ಬೆಂಗಳೂರು: ಈ ದಡ್ ನನ್ ಮಗಂಗೇ ಯಾವೋನಾದ್ರು ಇನ್ಮೇಲೆ ಬುದ್ಧಿವಂತ ಅಂದ್ರೇ ಅಷ್ಟೇ… ಸೆಂದಾಗಿರಕ್ಕಿಲ್ಲ’ ಎಂದು ನಟಿ ಉಪೇಂದ್ರ ಪೋಸ್ಟ್​ ಮಾಡಿದ್ದಕ್ಕೆ  ಚೇತನ್‌ ಅಹಿಂಸಾ ಅವರು ಪ್ರತಿಕ್ರಿಯಿಸಿ ಪರೋಕ್ಷವಾಗಿ ಟೀಕಿಸಿದ್ದಾರೆ.

ನಟ ಪವನ್‌ ಕಲ್ಯಾಣ್‌ ಗೆಲ್ಲಿಸಲು ಆಂಧ್ರ ಜನ 14 ವರ್ಷ ತೆಗೆದುಕೊಂಡರು, ಉಪೇಂದ್ರ ಅವರನ್ನು ಗೆಲ್ಲಿಸಲು ಕನ್ನಡ ಜನ ಇನ್ನು ಎಷ್ಟು ವರ್ಷ ತಗೋತ್ತಾರೋ ಗೊತ್ತಿಲ್ಲ ಎಂಬ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಚೇತನ್‌ ಅಹಿಂಸಾ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು,ನಿಜ ಹೇಳಬೇಕೆಂದರೆ, ನೀವು ಎಂದಿಗೂ ಬುದ್ಧಿವಂತರಾಗಿರಲಿಲ್ಲ— ನಿಮ್ಮ ಅಸಂಬದ್ಧ ಕಲ್ಪನೆಯ ಭ್ರಮೆ ಅಷ್ಟೇ” ಎಂದು ಎಕ್ಸ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಆಂಧ್ರ ಪ್ರದೇಶದಲ್ಲಿ ನಟ ಪವನ್ ಕಲ್ಯಾಣ್ ಜಯಭೇರಿ ಬಾರಿಸಿದ ಬೆನ್ನಲ್ಲಿ ನೆಟ್ಟಿಗರು ಉಪೇಂದ್ರ ಅವರನ್ನು ಟೀಕಿಸಿದ್ದಾರೆ.  ಆ ಪೋಸ್ಟ್‌ನ್ನು ಶೇರ್‌ ಮಾಡಿದ ಉಪೇಂದ್ರ ಅವರಯ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. 

ʻʻವಾಹ್ ಮೈ ಡಿಯರ್ ಪ್ರಜಾಪ್ರಭುಗಳೇ ವಾಹ್.. ಉಪೇಂದ್ರ ಸೋಲು ಗೆಲುವು ಬಗ್ಗೆ ತುಂಬಾ ಚಿಂತೆ ಮಾಡ್ತಿದೀರ! ಎಂಥ ನಿಸ್ವಾರ್ಥ! ಎಂಥಾ ತ್ಯಾಗ ಮನೋಭಾವ! ನಿಮ್ಮೆಲ್ಲರ ಪಾದಕ್ಕೆ ಅಡ್ ಬಿದ್ದೆ. ಡೋಂಟ್ ವರೀ. ನಾನ್ ಗೆಲ್ಬೇಕು ಅಂತ ಅನ್ನಿಸಿದಾಗ ಯಾವುದಾದರೂ ರಾಜಕೀಯ ಪಕ್ಷ ಸೇರಿ ನೀವ್ ಹೇಳ್ದಾಗೆಲ್ಲಾ ಮಾಡ್ತೀನಿ. ಗೆದ್ದೇ ಗೆಲ್ತೀನಿ. ನೀವ್ ಗೆಲ್ಲೋದ್ ಯಾವಾಗ ಅಂತ ನೀವ್ ಯೋಚನೆ ಮಾಡ್ರಪ್ಪೋ…ನೆಕ್ಸ್ಟ್ ಎಲೆಕ್ಷನ್​ನಲ್ಲಿ ನನಗ್ ಕೆಲ್ಸಾ ಕೊಡ್ತೀರ ಅಂದ್ರೆ ನಿಲ್ತೀನಿ. ಆಗ್ಲೂ ನೀವ್ ಎಮೋಷನಲ್ ಪ್ರಚಾರ ಮಾಡ್ರಿ. ಸಭೆ ಸಮಾರಂಭ ಎಲ್ಲಾ ಮಾಡ್ರಿ. ಕಷ್ಟ ಪಡ್ರಿ. ಆಮೇಲೆ ಐದು ವರ್ಷ ನೀವೇನ್ ಬೇಕಾದ್ರೂ ಮಾಡ್ಕಳಿ ನಾವ್ ಕೇಳಕ್ ಬರಲ್ಲ ಅಂದ್ರೆ. ಉಸ್.. ಏನ್ ಬರೀಬೇಕೋ ಗೊತ್ತಾಗ್ತಿಲ್ಲರಪ್ಪೋ.

Share this Story:

Follow Webdunia kannada

ಮುಂದಿನ ಸುದ್ದಿ

ಹಮಾರೆ ಬಾರಾಹ್‌ ಚಿತ್ರಕ್ಕೆ ಕರ್ನಾಟಕದಲ್ಲಿ ನಿಷೇಧ: ಆಕ್ರೋಶ ಹೊರಹಾಕಿದ ಆರ್‌.ಅಶೋಕ್