ಬೆಂಗಳೂರು: 75 ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಧ್ವನಿಯಲ್ಲಿ ವಂದೇ ಮಾತರಂ ಹಾಡು ಬಿಡುಗಡೆಯಾಗಿದ್ದು, ಈ ಹಾಡಿನಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ.
ಕಿಚ್ಚ ಸುದೀಪ್, ಶಿವರಾಜ್ ಕುಮಾರ್, ಗೋಲ್ಡನ್ ಸ್ಟಾರ್ ಗಣೇಶ್, ಧ್ರುವ ಸರ್ಜಾ, ರಿಷಬ್ ಶೆಟ್ಟಿ, ರಮೇಶ್ ಅರವಿಂದ್, ಜಗ್ಗೇಶ್, ಡಾಲಿ ಧನಂಜಯ್, ಸಾಲು ಮರದ ತಿಮ್ಮಕ್ಕ, ಎಸ್.ಎಲ್ ಬೈರಪ್ಪ, ವೆಂಕಟೇಶ್ ಪ್ರಸಾದ್ ಮುಂತಾದವರು ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ.
ಆದರೆ ದರ್ಶನ್, ಯಶ್ ಮತ್ತು ಇತರ ಕ್ಷೇತ್ರದ ಸಾಧಕರನ್ನು ವಿಡಿಯೋದಲ್ಲಿ ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಾಡು ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್ ಖಾತೆಯಲ್ಲೇ ಬಿಡುಗಡೆಯಾಗಿದೆ.