ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಇದೀಗ ಬಿಡುಗಡೆಯಾಗಿದ್ದಾರೆ.
ಇಂದು ಸಂತೋಷ್ ಗೆ ಜಾಮೀನು ಮಂಜೂರಾಗಿದೆ. ಬಿಡುಗಡೆ ಆಗುತ್ತಿದ್ದಂತೇ ಅವರ ಅಭಿಮಾನಿಗಳು ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಜೈಲಿನಿಂದ ಹೊರಬಂದ ತಕ್ಷಣ ಸಂತೋಷ್ ತಮ್ಮ ವಕೀಲರ ಜೊತೆ ತೆರಳಿದ್ದಾರೆ.
ಬಿಗ್ ಬಾಸ್ ಸ್ಪರ್ಧಿಯಾಗಿ ಮನೆಯೊಳಗೆ ಪ್ರವೇಶಿಸಿದ್ದ ಸಂತೋಷ್ ರನ್ನು ಅಲ್ಲಿಂದಲೇ ಅರಣ್ಯಾಧಿಕಾರಿಗಳು ಬಂಧಿಸಿದ್ದರು. ಇದೀಗ ಮತ್ತೆ ಅವರು ಬಿಗ್ ಬಾಸ್ ಮನೆಗೆ ಪ್ರವೇಶಿಸುತ್ತಾರಾ ಕಾದು ನೋಡಬೇಕಿದೆ.
ಇದೇ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟರಾದ ಜಗ್ಗೇಶ್, ದರ್ಶನ್, ರಾಕ್ ಲೈನ್ ವೆಂಕಟೇಶ್ ಮುಂತಾದವರ ವಿರುದ್ಧವೂ ದೂರು ದಾಖಲಾಗಿತ್ತು. ಇವರ ಮನೆಗೆ ಭೇಟಿ ನೀಡಿದ್ದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದರು.