Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರದ ವಿಶೇಷ ಯೋಜನೆಗೆ ರಾಯಭಾರಿಯಾದ ವಸಿಷ್ಠ ಸಿಂಹ

Karnataka Congress Government

Sampriya

ಬೆಂಗಳೂರು , ಬುಧವಾರ, 8 ಅಕ್ಟೋಬರ್ 2025 (15:56 IST)
Photo Credit X
ಬೆಂಗಳೂರು: ರಾಜ್ಯದ 15 ಜಿಲ್ಲೆಯಲ್ಲಿನ 27 ತಾಲ್ಲೂಕುಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯ್ತಿಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆಗೆ ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗಿದೆ. ‘‘

ಸ್ಯಾಂಡಲ್‌ವುಡ್‌ನ ಖ್ಯಾತ ನಟ ವಸಿಷ್ಠ ಸಿಂಹ ಅವರನ್ನು ರಾಯಭಾರಿಯನ್ನಾಗಿ ನೇಮಿಸಲಾಗಿದೆ. 

ನಾಳೆ ವಿಧಾನಸೌಧದ ಬ್ವಾಂಕ್ವೆಟ್‌ ಹಾಲ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ರಾಜ್ಯದಲ್ಲಿ ಅಂತರ್ಜಲ ಸಾಕ್ಷರತೆಗೆ ಒತ್ತು ನೀಡುವ ಗುರಿಯನ್ನು ಹೊಂದಲಾಗಿದೆ ಎಂದರು.


ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು  ಅವರು ಪ್ರತಿಕ್ರಿಯಿಸಿ, ಈ ಮಹತ್ವಕಾಂಕ್ಷಿ ಯೋಜನೆಗೆ ಸಿಎಂ ಸಿದ್ದರಾಮಯ್ಯ  ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಚಾಲನೆ ನೀಡಲಿದ್ದಾರೆ.

ಪ್ರಕೃತಿಯಿಂದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ ʻನೀರಿದ್ದರೆ ನಾಳೆʼ ಎನ್ನುವ ವಿನೂತನ ಕಾರ್ಯಕ್ರಮವನ್ನಯ ಯೋಜಿಸಲಾಗಿದೆ ಎಂದರು. 

ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳ 27 ತಾಲ್ಲೂಕುಗಳ 525 ಅಂತರ್ಜಲ  ಅತಿಬಳಕೆ ಗ್ರಾಮ ಪಂಚಾಯತಿಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದ 100ಕ್ಕೂ ಹೆಚ್ಚು ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಿವೆ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್‌ಬಾಸ್‌ ವೀಕ್ಷಕರಲ್ಲಿ ಕ್ಷಮೆಕೋರಿದ ಕಲರ್ಸ್ ಕನ್ನಡ ವಾಹಿನಿ