Webdunia - Bharat's app for daily news and videos

Install App

Vasuki Vaibhav: ತಾಯಂದಿರ ದಿನವೇ ಗುಡ್ ನ್ಯೂಸ್ ಹಂಚಿಕೊಂಡ ವಾಸುಕಿ ವೈಭವ್

Krishnaveni K
ಭಾನುವಾರ, 11 ಮೇ 2025 (14:03 IST)
Photo Credit: Instagram
ಬೆಂಗಳೂರು: ವಿಶ್ವ ತಾಯಂದಿರ ದಿನದಂದೇ ಸ್ಯಾಂಡಲ್ ವುಡ್ ಸಂಗೀತ ನಿರ್ದೇಶಕ, ಗಾಯಕ ವಾಸುಕಿ ವೈಭವ್ ದಂಪತಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.

ವಾಸುಕಿ ವೈಭವ್ ಮತ್ತು ಬೃಂದಾ ವಿಕ್ರಮ್ ದಂಪತಿ ಇಂದು ತಾಯಂದಿರ ದಿನದಂದು ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಖುಷಿ ಸುದ್ದಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ವಾಸುಕಿ ವೈಭವ್ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಬೃಂದಾ ಬೇಬಿ ಬಂಪ್ ಫೋಟೋ ಪ್ರಕಟಿಸಿರುವ ವಾಸುಕಿ ವೈಭವ್ ‘ಎಲ್ಲಾ ತಾಯಂದಿರಿಗೂ ಶುಭಾಶಯಗಳು. ನೀವಿಲ್ಲದೇ ಇದ್ದಿದ್ದರೆ ಜಗತ್ತು ಈ ರೀತಿ ಇರುತ್ತಿರಲಿಲ್ಲ. ನನಗೆ ತಾಯಂದಿರ ದಿನ ವಿಶೇಷವಾಗಿದೆ. ಅಮ್ಮನಾಗುತ್ತಿರುವ ಹೊಸ ಸದಸ್ಯೆಯನ್ನು ನಿಮಗೆ ಪರಿಚಯಿಸುತ್ತಿದ್ದೇನೆ. ನಿಮ್ಮ ಹಾರೈಕೆ, ಆಶೀರ್ವಾದ, ಪ್ರೀತಿಯಿರಲಿ’ ಎಂದು ಬರೆದುಕೊಂಡಿದ್ದಾರೆ.

ವಾಸುಕಿಯ ಈ ಫೋಟೋಗೆ ಕ್ಷಣಾರ್ಧದಲ್ಲಿ ಸಾಕಷ್ಟು ಲೈಕ್ಸ್, ಶುಭಾಶಯಗಳ ಸಂದೇಶ ಬಂದಿದೆ. 2023 ರಲ್ಲಿ ಬೃಂದಾ ಜೊತೆ ವಾಸುಕಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಮುಂದಿನ ಸುದ್ದಿ
Show comments