Publish Date: Wed, 16 Feb 2022 (17:58 IST)
Updated Date: Wed, 16 Feb 2022 (18:00 IST)
ಬೆಂಗಳೂರು: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟ ರಾಜೇಶ್ ಆರೋಗ್ಯದಲ್ಲಿ ಗಮನಾರ್ಹ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಉಸಿರಾಟದ ಸಮಸ್ಯೆ ಮತ್ತು ಸೋಂಕಿನಿಂದಾಗಿ ರಾಜೇಶ್ ಮೊನ್ನೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಐಸಿಯುವಿನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.
ಇದೀಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬರುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಹಾಗಿದ್ದರೂ ಅವರನ್ನು ತೀವ್ರ ನಿಗಾದಲ್ಲಿರಿಸಲಾಗಿದೆ.