Publish Date: Thu, 30 Mar 2023 (18:06 IST)
Updated Date: Thu, 30 Mar 2023 (18:07 IST)
ಚೆನ್ನೈ: ಅಮೃತವರ್ಷಿಣಿ ಸಿನಿಮಾದಲ್ಲಿ ನಾಯಕರಾಗಿ ಅಭಿನಯಿಸಿದ್ದ ಹಿರಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕನ್ನಡ ಸೇರಿದಂತೆ ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಸ್ಪುರದ್ರೂಪಿ ನಟ ಶರತ್ ಬಾಬು ಅನಾರೋಗ್ಯಕ್ಕೀಡಾಗಿದ್ದು ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
71 ವರ್ಷದ ಶರತ್ ಬಾಬು ಆರೋಗ್ಯ ಸ್ಥಿತಿ ಬಗ್ಗೆ ತೆಲುಗು ನಟಿ ಕಲ್ಯಾಣಿ ಪಾದಾಲ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಅವರ ಅನಾರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.