ಹಿರಿಯ ನಟ ಶನಿ ಮಹದೇವಪ್ಪ ನಿಧನ

Webdunia
ಸೋಮವಾರ, 4 ಜನವರಿ 2021 (10:03 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ ಶನಿ ಮಹದೇವಪ್ಪ ವಯೋಸಹಜ ಖಾಯಿಲೆಯಿಂದಾಗಿ ನಿನ್ನೆ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.


ಸಕ್ಕರೆ ಖಾಯಿಲೆ, ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಕನ್ನಡದಲ್ಲಿ 400 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಸಂಪತ್ತಿಗೆ ಸವಾಲ್, ಭಕ್ತ ಪ್ರಹ್ಲಾದ, ಶಂಕರ್ ಗುರು, ಕವಿರತ್ನ ಕಾಳಿದಾಸ, ಹಾಲು ಜೇನು, ರಣರಂಗ, ಚಕ್ರವ್ಯೂಹ ಮುಂತಾದ ಸೂಪರ್ ಹಿಟ್ ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಮೂಲತಃ ರಂಗಭೂಮಿ ಕಲಾವಿದರಾಗಿದ್ದ ಮಹದೇವಪ್ಪನವರಿಗೆ ನಾಟಕದಿಂದಾಗಿಯೇ ಶನಿ ಎನ್ನುವ ಹೆಸರು ಸಿಕ್ಕಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments