Publish Date: Thu, 08 Sep 2022 (18:22 IST)
Updated Date: Thu, 08 Sep 2022 (18:23 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟಿ ಲೀಲಾವತಿ ಅನಾರೋಗ್ಯದಿಂದ ಬಳಲುತ್ತಿದ್ದು ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಲೀಲಾವತಿ ತಮ್ಮ ನೆಲಮಂಗಲದ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ವಯೋ ಸಹಜ ಖಾಯಿಲೆಯಿಂದಾಗಿ ಅವರು ಹಾಸಿಗೆ ಹಿಡಿದಿದ್ದಾರೆ.
ಅವರಿಗೆ ಅನಾರೋಗ್ಯವೆಂಬ ಸುದ್ದಿ ತಿಳಿಯುತ್ತಿದ್ದಂತೇ ವಾಣಿಜ್ಯ ಮಂಡಳಿ ಸದಸ್ಯರು ಮನೆಗೆ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿದ್ದಾರೆ.