Publish Date: Wed, 26 May 2021 (10:06 IST)
Updated Date: Wed, 26 May 2021 (10:08 IST)
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಪೋಷಕ ಪಾತ್ರಗಳನ್ನು ನಿರ್ವಹಿಸುತ್ತಿದ್ದ ಬಿ.ಎಂ.ಕೃಷ್ಣೇಗೌಡ ಅವರು ನಿಧನರಾಗಿದ್ದಾರೆ.
ಅವರಿಗೆ 80 ವರ್ಷ ವಯಸ್ಸಾಗಿದ್ದು, ಕೊರೊನಾ ಸೋಂಕಿಗೆ ಒಳಗಾಗಿದ್ದರು. ಆಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಒಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇವರು ವಿಷ್ಣುವರ್ಧನ್, ರಮೇಶ್ ಅರವಿಂದ್, ಶಿವರಾಜ್ ಕುಮಾರ್, ಅಂಬರೀಶ್ ಸೇರಿದಂತೆ ಹಲವು ನಾಯಕರ ಜೊತೆ ನಟಿಸಿದ್ದಾರೆ. ಇವರ ನಿಧನಕ್ಕೆ ಕನ್ನಡ ಚಿತ್ರರಂಗ ಸಂತಾಸ ಸೂಚಿಸಿದ್ದಾರೆ.